ಗ್ರಾಮ ಪಂಚಾಯತ್ ಸದಸ್ಯೆಯೊಬ್ಬಳು ತನ್ನ ಅನೈತಿಕ ಸಂಬಂಧದ ಪೋಷಣೆಗಾಗಿ ಸುಪಾರಿ ಕೊಟ್ಟು ಗಂಡನನ್ನೇ ಕೊಲ್ಲಿಸಿದ ಹಾಗೂ ಅದನ್ನು ಆತ್ಮಹತ್ಯೆ ಎಂದು ಬಿಂಬಿಸಿದ ಘಟನೆ ನಡೆದಿದೆ. ಇಷ್ಟಲ್ಲದೆ, ಗಂಡ ಸಾವಿನ ಬಳಿಕ ಪತ್ರಿಕಾಗೋಷ್ಠಿಯನ್ನೂ ನಡೆಸಿದ ಈಕೆ, ಗಂಡನ ಸಾವು ಅನುಮಾನಾಸ್ಪದವಾಗಿದೆ ಎಂದೂ ಹೇಳಿದ್ದಳು.ಬೆಂಗಳೂರಿನ ನಾಲ್ವರು ಸುಪಾರಿ ಕಿಲ್ಲರ್‌ಗಳಿಗೆ ಹಣ ಕೊಟ್ಟು ಪತಿಯ ಕೊಲೆ ಮಾಡಿಸಿರುವುದು ತನಿಖೆ ವೇಳೆ ಬಯಲಾಗಿದೆ. ಸದ್ಯ ಎಂ.ಕೆ.ದೊಡ್ಡಿ ಪೊಲೀಸರು ಗ್ರಾ.ಪಂ ಸದಸ್ಯೆ ಚಂದ್ರಕಲಾಳನ್ನು ಬಂಧಿಸಿದ್ದು, ಉಳಿದ ಆರೋಪಿಗಳ ಸೆರೆಗೆ ಬಲೆ ಬೀಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

