Breaking News

ನಿತೀಶ್‌ ಕುಮಾರ್‌ ರೆಡ್ಡಿಗೆ ಕಾನೂನು ಸಂಕಷ್ಟ: 5 ಕೋಟಿ ರೂ.ಗೆ ಮೊಕದ್ದಮೆ

ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಟೆಸ್ಟ್ ಸರಣಿಯಿಂದ ಹೊರ ಬಿದ್ದಿರುವ ಭಾರತದ ಆಲ್‌ರೌಂಡರ್ ನಿತೀಶ್ ಕುಮಾರ್ ರೆಡ್ಡಿ ಇದೀಗ ಕಾನೂನು ಸಮಸ್ಯೆಯಲ್ಲಿ ಸಿಲುಕಿದ್ದಾರೆ.ಸ್ಕ್ವೇರ್ ದಿ ಒನ್ ಜೊತೆಗಿನ ಅವರ ನಾಲ್ಕು ವರ್ಷಗಳ ಸಂಬಂಧ ಕೊನೆಗೊಂಡಿತು. ಆದರೆ, ಬಾಕಿ ಹಣವನ್ನು ಪಾವತಿಸದ ಕಾರಣ ಸಂಸ್ಥೆ ಈಗ ರೆಡ್ಡಿ ಮೇಲೆ ಆರೋಪ ಮಾಡಿದೆ.ಸನ್‌ರೈಸರ್ಸ್ ಹೈದರಾಬಾದ್ ಆಲ್‌ರೌಂಡರ್ ರೆಡ್ಡಿ ನಿರ್ವಹಣಾ ಒಪ್ಪಂದವನ್ನು ಉಲ್ಲಂಘಿಸಿದ್ದಾರೆ. ಬಾಕಿ ಪಾವತಿಸಿಲ್ಲ ಎಂದು ಆರೋಪಿಸಿ ಸ್ಕ್ವೇರ್ ದಿ ಒನ್ ಪ್ರೈವೇಟ್ ಲಿಮಿಟೆಡ್ ಮಧ್ಯಸ್ಥಿಕೆ ಮತ್ತು ಸಂಧಾನ ಕಾಯ್ದೆಯ ಸೆಕ್ಷನ್ 11(6) ರ ಅಡಿಯಲ್ಲಿ ಅರ್ಜಿ ಸಲ್ಲಿಸಿದೆ.ದೆಹಲಿ ಹೈಕೋರ್ಟ್ ಜುಲೈ 28, ಸೋಮವಾರ ಪ್ರಕರಣದ ವಿಚಾರಣೆ ನಡೆಸುವ ಸಾಧ್ಯತೆಯಿದೆ.

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *