Breaking News

ಬೆಂಗಳೂರು: ಕಲಾಸಿಪಾಳ್ಯ ಬಸ್‌ ನಿಲ್ದಾಣ ಹೆಸರು ಬದಲಾವಣೆ!

ನಗರದ ಕಲಾಸಿಪಾಳ್ಯ ಬಸ್​ ನಿಲ್ದಾಣದ ಹೆಸರನ್ನು ಬದಲಾವಣೆ ಮಾಡಲಾಗಿದ್ದು, ಹೊಸ ಹೆಸರನ್ನು ಇಡಲಾಗಿದೆ. ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಟೇಪ್ ಕತ್ತರಿಸಿ ನಾಮಫಲಕವನ್ನು ಶನಿವಾರ ಅನಾವರಣ ಮಾಡಿದ್ದಾರೆ.ದೊಡ್ಡಣ್ಣಶೆಟ್ಟರು ಜಾತಿ ಅಥವಾ ಸಾಮಾಜಿಕ ಸ್ಥಾನಮಾನವನ್ನು ಲೆಕ್ಕಿಸದೆ ಎಲ್ಲರಿಗೂ ಶಿಕ್ಷಣವನ್ನು ಒದಗಿಸಿದ್ದರು. ಶಾಲೆಗಳು ಮತ್ತು ಕಾಲೇಜುಗಳನ್ನು ಸ್ಥಾಪಿಸಿದರು, ಸಾಮಾಜಿಕ ಸೇವೆಗೆ ತಮ್ಮನ್ನು ಅರ್ಪಿಸಿಕೊಂಡರು. ಸಮಾಜಕ್ಕೆ ಅವರ ಕೊಡುಗೆಗಳನ್ನು ಗುರುತಿಸಿ, ಅವರಿಗೆ “ಜನೋಪಕಾರಿ” ಎಂಬ ಬಿರುದನ್ನು ನೀಡಿ ಗೌರವಿಸಲಾಗಿದೆ.ದೊಡ್ಡಣ್ಣಶೆಟ್ಟರು ಕಲಾಸಿಪಾಳ್ಯ ಬಸ್ ನಿಲ್ದಾಣದ ನಿರ್ಮಾಣಕ್ಕೆ ತಮ್ಮ ಜಮೀನನ್ನು ದಾನ ಮಾಡಿದ್ದವರು. ಅವರ ಈ ದಾನಧರ್ಮದ ಕಾರ್ಯವು ಬೆಂಗಳೂರಿನ ಸಾರಿಗೆ ವ್ಯವಸ್ಥೆಯ ಒಂದು ಪ್ರಮುಖ ಕೊಂಡಿಯಾದ ಕಲಾಸಿಪಾಳ್ಯ ಬಸ್ ನಿಲ್ದಾಣದ ಅಸ್ತಿತ್ವಕ್ಕೆ ಕಾರಣವಾಯಿತು. ಈ ನಿಲ್ದಾಣವು ದಕ್ಷಿಣ ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶ, ಮತ್ತು ಕೇರಳದಂತಹ ರಾಜ್ಯಗಳಿಗೆ ಸಂಪರ್ಕ ಕಲ್ಪಿಸುವ ಪ್ರಮುಖ ಕೇಂದ್ರವಾಗಿದೆ.

Share News

About BigTv News

Check Also

ಉಸಿರುಗಟ್ಟಿಸಿ ಪತಿಯ ಹತ್ಯೆ; ಪತ್ನಿ ಸೇರಿ ಮೂವರ ಬಂಧನ

ಬೆಂಗಳೂರು: ಪಾರ್ಶ್ವವಾಯುವಿನಿಂದ ಹಾಸಿಗೆ ಹಿಡಿದಿದ್ದ ಪತಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ಬಿಂಬಿಸಿದ ಆರೋಪದಡಿ ಪತ್ನಿ ಸೇರಿದಂತೆ ಮೂವರನ್ನು …

Leave a Reply

Your email address will not be published. Required fields are marked *