ಹಾಸನ ಜಿಲ್ಲೆಯ ಅರಸೀಕೆರೆಯ ಕೋಡಿ ಮಠಕ್ಕೆ ಭೇಟಿ ನೀಡಿ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮೀಜಿ ಅವರ ಆಶೀರ್ವಾದ ಪಡೆದ ಡಿಕೆಶಿ ಗೌಪ್ಯ ಸಭೆ ನಡೆಸಿದ್ದರು. ನಂತರ ಮಾತನಾಡಿದ್ದ ಡಿಕೆಶಿ ಶಿವಲಿಂಗ ಅಜ್ಜಯ್ಯ ಗದ್ದುಗೆಗೆ ಪೂಜೆ ಸಲ್ಲಿಸಿದ್ದೇನೆ. ಮುಂದೆ ಎಲ್ಲವೂ ಒಳ್ಳೇದಾಗಲಿದೆ ಎಂದು ಹೇಳಿದ್ದರು. ನಾವು ಎಲ್ಲರ ಸಂಸ್ಕೃತಿಗೆ ಬೆಲೆ ಕೊಡುತ್ತೇವೆ ಎಂದು ಹೇಳಿದ್ದರು.ಸರ್ಕಾರಿ ಕಾರ್ಯಕ್ರಮ ನಿಮಿತ್ತ ಅರಸೀಕೆರೆಗೆ ಸಿಎಂ ಸಿದ್ದರಾಮಯ್ಯ ಜೊತೆ ಹೆಲಿಕಾಪ್ಟರ್‌ನಲ್ಲಿ ಬಂದಿದ್ದ ಡಿ.ಕೆ.ಶಿವಕುಮಾರ್ ನಂತರ ಅಲ್ಲಿಂದ ದೇವಾಲಯಗಳಿಗೆ ಭೇಟಿ ನೀಡಿದ್ದು, ಅರಸೀಕೆರೆ ಜೇನುಕಲ್ಲು ಸಿದ್ದೇಶ್ವರ ಬೆಟ್ಟದ ಮೆಟ್ಟಿಲುಗಳಿಗೆ, ಬಳಿಕ ಜೇನುಕಲ್ಲು ಸಿದ್ದೇಶ್ವರ ದೇಗುಲಕ್ಕೆ ತೆರಳಿ ಪೂಜೆ ಸಲ್ಲಿಸಿದ್ದರು. ಬಳಿಕ ಕೋಡಿಮಠಕ್ಕೆ ಭೇಟಿ ನೀಡಿ ಬಂದ ವೇಳೆ ಮಾಧ್ಯಮದವರು ಪ್ರಶ್ನೆ ಕೇಳುವಾಗ ಕಾರ್ಯಕರ್ತರು ಡಿ.ಕೆ.ಶಿವಕುಮಾರ್ ಅವರೇ ಮುಂದಿನ ಸಿಎಂ ಎಂಬ ಘೋಷಣೆಗಳನ್ನು ಕೂಗಿದ್ದರು. ಆಗಲೂ ಡಿಸಿಎಂ ಡಿಕೆಶಿ ಏನನ್ನೂ ಮಾತಾಡದೆ ಸುಮ್ಮನಿದ್ದರು. ಇದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿತ್ತು.
bigtvnews | Hubli Dharwad News | Kannada News | Karnataka News Hubli News | News In Hubli | Local news

