Breaking News

ಧರ್ಮಸ್ಥಳದಲ್ಲಿ ಶವ ಹೂಳಿರುವ ಬಗ್ಗೆ ಸ್ಪೋಟಕ ಹೇಳಿಕೆ ನೀಡಿದ ಅನಾಮಿಕ; ಪೊಲೀಸರಲ್ಲಿ ಢವ-ಢವ!

ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿರುವ ಕುರಿತು ಭಾರೀ ಸಂಚಲನ ಉಂಟುಮಾಡಿರುವ ಪ್ರಕರಣದಲ್ಲಿ, ವಿಶೇಷ ತನಿಖಾ ತಂಡ (ಎಸ್‌ಐಟಿ) ತನಿಖೆಗೆ ಮತ್ತಷ್ಟು ತೀವ್ರತೆ ನೀಡಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಬೆಳವಣಿಗೆಯೊಂದು ನಡೆದಿದೆ.ಅನಾಮಿಕನ ಹೇಳಿಕೆಗಳು ಹೊರಬಿದ್ದ ಬೆನ್ನಲ್ಲೇ, ಎಸ್‌ಐಟಿ ತಂಡ ತನಿಖೆಗೆ ಇನ್ನಷ್ಟು ಬಲ ನೀಡಿದ್ದು, ಈ ಮಾಹಿತಿ ಆಧಾರದ ಮೇಲೆ ಬೆಳ್ತಂಗಡಿ ಪೊಲೀಸ್ ಠಾಣೆಗೆ ಸೂಚನೆ ನೀಡಲಾಗಿದೆ. ಅನುಮಾನಸ್ಪದ, ನಿಗೂಢ ಸಾವುಗಳು ಮತ್ತು ಅಪರಿಚಿತ ಶವಗಳ ದಾಖಲೆಗಳನ್ನು ಒಗ್ಗೂಡಿಸಿ ಪರಿಶೀಲನೆ ನಡೆಸುವಂತೆ ತಿಳಿಸಲಾಗಿದೆ.ಶವಗಳ ಹೂಳುವಿಕೆ ಬಗ್ಗೆ ಯಾವುದೇ ಕಾನೂನು ಪ್ರಕ್ರಿಯೆ ಇಲ್ಲದಿರುವುದು ಮತ್ತಷ್ಟು ಅನುಮಾನ ಹುಟ್ಟಿಸುತ್ತಿದೆ. ಎಸ್‌ಐಟಿ ತನ್ನ ತನಿಖೆ ವಿಸ್ತರಿಸಿದ್ದು, ಬೆಳ್ತಂಗಡಿ ಪೊಲೀಸ್ ಠಾಣೆಗೂ ದಾಖಲೆ ಸಂಗ್ರಹದ ಸೂಚನೆ ನೀಡಲಾಗಿದೆ.

Share News

About BigTv News

Check Also

ಅತ್ಯಾಚಾರ ಎಸೆಗಿದವರ ಮೇಲೆ‌ ಪ್ರತೀಕಾರ – ಅಪಹರಣ ಮಾಡಿ ಸಿಕ್ಕಿಬಿದ್ದ ಆರೋಪಿಗಳು!

ಬೆಂಗಳೂರು: ಮಾರತ್ತಹಳ್ಳಿಯಲ್ಲಿ ಸ್ನೇಹಿತನ ಪ್ರೇಯಸಿಯನ್ನು ಕಾಲ್‌ಗರ್ಲ್ ಎಂದು ತಪ್ಪಾಗಿ ಭಾವಿಸಿ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ, ಪ್ರತೀಕಾರಕ್ಕಾಗಿ ಇಬ್ಬರನ್ನು ಅಪಹರಿಸಿ …

Leave a Reply

Your email address will not be published. Required fields are marked *