ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಶೇಡಬಾಳ ಗ್ರಾಮದ ಹೊರವಲಯದ ಕಬ್ಬಿನ ಗದ್ದೆಯಲ್ಲಿ ಹೂವಿನ ವ್ಯಾಪಾರಿ ಶಶಿಕಾಂತ ಎಂಬುವರ ಶವ ಪತ್ತೆಯಾಗಿತ್ತು. ಶಶಿಕಾಂತ ಕಾಗವಾಡ ತಾಲೂಕಿನ ಶೇಡಬಾಳ ಗ್ರಾಮದ ನಿವಾಸಿಯಾಗಿದ್ದರು.ಕೊಲೆ ಕೇಸ್ ದಾಖಲಿಸಿಕೊಂಡ ಪೊಲೀಸರು ತನಿಖೆಯನ್ನ ಶುರು ಮಾಡಿದ್ದಾರೆ. ಯಾವುದೇ ಸುಳಿವು ಇಲ್ಲದೆ ಆರೋಪಿ ಕೊಲೆ ಮಾಡಿ ಹೋಗಿದ್ದು, ಪೊಲೀಸರಿಗೆ ತಲೆನೋವಾಗಿ ಪರಿಣಮಿಸಿತ್ತು. ಆರಂಭದಲ್ಲಿ ಮಾಹಿತಿ ಪಡೆದ ಪೊಲೀಸರಿಗೆ ಗ್ರಾಮದಲ್ಲೇ ಕೆಲವರು ಶಶಿಕಾಂತ ಜೊತೆಗೆ ಮನೆ ವಿಚಾರದಲ್ಲಿ ಕಿರಿಕ್ ಮಾಡುತ್ತಿದ್ದರು.ಬೈಕ್ ಹಿಂದೆ ಕುಳಿತಿದ್ದವನನ್ನು ಕೆಳಗೆ ಬೀಳಿಸಿ ಬಳಿಕ ಆತನ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಂದು, ಸಾಕ್ಷಿ ಸಿಗಬಾರದು ಅಂತ ಆತನ ಮೊಬೈಲ್ ಹಾಗೂ ಕಲ್ಲನ್ನು ಅಲ್ಲೇ ಪಕ್ಕದಲ್ಲೇ ಇದ್ದ ಕೃಷಿ ಹೊಂಡದಲ್ಲಿ ಬಿಸಾಡಿ ತನೆಗೇನೂ ಗೊತ್ತೆ ಇಲ್ಲ ಎಂಬಂತೆ ಮತ್ತೆ ಬಿರಿಯಾನಿ ಅಂಗಡಿ ಶುರು ಮಾಡಿದ್ದಾನೆ. ಆದರೆ, ಪೊಲೀಸರು ಚಾಣಾಕ್ಷತನದಿಂದ ಆರೋಪಿಯನ್ನು ಬಂಧಿಸಿ, ಹಿಂಡಲಗಾ ಜೈಲಿಗೆ ಕಳುಹಿಸುವಲ್ಲಿ ಯಶಸ್ವಿಯಾಗಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

