ಹೆಚ್ಐವಿ ಪೀಡಿತನಾಗಿದ್ದ ತಮ್ಮನಿಂದ ಮರ್ಯಾದೆ ಹೋಗುತ್ತದೆ ಎಂದು ಅಕ್ಕ ತನ್ನ ಗಂಡನ ಜೊತೆ ಸೇರಿ ಕೊಲೆ ಮಾಡಿರುವ ಘಟನೆ ಹೊಳಲ್ಕೆರೆ ತಾಲೂಕಿನ ದುಮಿ ಗ್ರಾಮದಲ್ಲಿ ನಡೆದಿದೆ.ಮಲ್ಲಿಕಾರ್ಜುನ್ (23) ಕೊಲೆಯಾದ ಸಹೋದರನಾಗಿದ್ದು ಘಟನೆಗೆ ಸಂಭಂಧಿಸಿದಂತೆ ಅಕ್ಕ ನಿಶಾ ಹಾಗೂ ಆಕೆಯ ಪತಿ ಮಂಜುನಾಥ್ ನನ್ನು ಪೊಲೀಸರು ಬಂಧಿಸಿದ್ದಾರೆ.ಮಲ್ಲಿಕಾರ್ಜುನ್ ಬೆಂಗಳೂರಿನಲ್ಲಿ ಗಾರ್ಮೆಂರ್ಟ್ನಲ್ಲಿ ಕೆಲಸ ಮಾಡುತ್ತಿದ್ದರು ಕಳೆದ ಜುಲೈ 23ರಂದು ತನ್ನ ಸ್ವಗ್ರಾಮವಾದ ದುಮ್ಮಿಗೆ ಕಾರಿನಲ್ಲಿ ಸ್ನೇಹಿತರೊಂದಿಗೆ ಬರುತ್ತಿದ್ದಾಗ ಹಿರಿಯೂರು ತಾಲ್ಲೂಕಿನ ಐಮಂಗಲ ಬಳಿ ಅಪಘಾತ ಸಂಭವಿಸಿ ಕಾಲು ಮುರಿವಾಗಿ ದಾವಣಗೆರೆ ಆಸ್ಪತ್ರೆಗೆ ದಾಖಲಾಗಿದ್ದ.ಮೃತನ ತಂದೆ ನಾಗರಾಜ್ ಹೊಳಲ್ಕೆರೆ ಪೊಲೀಸ್ ಠಾಣೆಗೆ ದೂರು ನೀಡಿರು. ತನಿಖೆ ವೇಳೆ ಮಲ್ಲಿಕಾರ್ಜುನ ಹೆಚ್ಐವಿ ಫೀಡಿತ ಎಂಬ ಕಾರಣಕ್ಕೆ ಮರ್ಯಾದೆಗೆ ಅಂಜಿ ಸಹೋದರಿಯೇ ಹತ್ಯೆಗೈದಿರುವ ಸತ್ಯ ಬೆಳಕಿಗೆ ಬಂದಿದೆ. ಈಸಂಬಂಧ ಹೊಳಲ್ಕೆರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಿಶಾಳನ್ನ ಬಂಧಿಸಿರುವ ಪೊಲೀಸರು ವಿಚಾರಣೆ ಮುಂದುವರಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

