Breaking News

ಎಲೆಕ್ಟ್ರಿಕ್ ಬೈಕ್ ಗೆ ಬೆಂಕಿ: ಹೊತ್ತಿ ಉರಿದ ಓಲಾ ಕಂಪನಿಯ ಇವಿ ಬೈಕ್!

ಹುಬ್ಬಳ್ಳಿ: ಶಾರ್ಟ್ ಸರ್ಕ್ಯೂಟ್ ನಿಂದ ಎಲೆಕ್ಟ್ರಿಕ್ ಬೈಕ್ ಏಕಾಏಕಿ ಹೊತ್ತಿ ಉರಿದ ಘಟನೆ ಹುಬ್ಬಳ್ಳಿಯ ಕೇಶವಕುಂಜದ ಸಮೀಪದಲ್ಲಿ ನಡೆದಿದೆ. ಓಲಾ ಕಂಪನಿಯ ಎಲೆಕ್ಟ್ರಿಕ್ ಬೈಕ್ ಏಕಾಏಕಿ ಹೊತ್ತಿ ಉರಿದಿದ್ದು, ಶಾರ್ಟ್ ಸರ್ಕ್ಯೂಟ್ ನಿಂದ ಹೊತ್ತಿ ಉರಿದಿರಬಹುದು ಎಂದು ಶಂಕಿಸಲಾಗಿದ್ದು, ಮಳೆಗಾಲದ ಸಮಯದಲ್ಲಿ ಎಲೆಕ್ಟ್ರಿಕ್ ಬೈಕ್ ಹೊತ್ತಿ ಉರಿದಿದ್ದು, ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿದೆ.. ಇನ್ನೂ ಎಲೆಕ್ಟ್ರಿಕ್ ಬೈಕ್ ಸಂಪೂರ್ಣ ಸುಟ್ಟು ಕರಕಲಾಗಿದ್ದು, ಸ್ಥಳೀಯರು ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ. ಅಲ್ಲದೇ ಎಲೆಕ್ಟ್ರಿಕ್ ಬೈಕ್ ಮಳೆಗಾಲದಲ್ಲಿ ಎಷ್ಟು ಸೇಫ್ ಎಂದು ಜನರು ತಮ್ಮಷ್ಟಕ್ಕೇ ತಾವೇ ಮಾತನಾಡಿಕೊಳ್ಳುತ್ತಿದ್ದು, ಬೈಕ್ ಸವಾರರಲ್ಲಿ ಆತಂಕ ಮನೆ ಮಾಡಿದೆ.

Share News

About Shaikh BigTv

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *