Breaking News

ಬೆಂಗಳೂರಿನಿಂದ ಕಾರ್ಯಾಚರಿಸುತ್ತಿದ್ದ ಶಂಕಿತ ಅಲ್ ಕೈದಾ ಭಯೋತ್ಪಾದಕಿ ಸಮಾ ಪರ್ವೀನ್ ಬಂಧಿಸಿದ ಗುಜರಾತ್ ಎಟಿಎಸ್!

ಅಲ್ ಕೈದಾ ಉಗ್ರ ಸಂಘಟನೆಯೊಂದಿಗೆ ನಂಟು ಹೊಂದಿರುವ ಆರೋಪದಲ್ಲಿ ಸಮಾ ಪರ್ವೀನ್ ಎಂಬಾಕೆಯನ್ನು ಗುಜರಾತ್ ಭಯೋತ್ಪಾದನೆ ನಿಗ್ರಹ ದಳದ ಪೊಲೀಸರು ಬೆಂಗಳೂರಿನಿಂದ ಬಂಧಿಸಿದ್ದಾರೆ. ಈಕೆ ದೇಶ ವಿರೋಧಿ ಕೃತ್ಯಗಳನ್ನು ಮಾಡುವ ಮೂಲಕ ಜಿಹಾದಿ ಚಟುವಟಿಕೆಗಳಲ್ಲಿ ಶಾಮೀಲಾಗಿದ್ದಳು ಎಂಬ ಆರೋಪವಿದೆ.ಮಾಧ್ಯಮಗಳಲ್ಲಿ ಪ್ರಚೋದನಕಾರಿ ವಿಷಯವನ್ನು ಹಂಚಿಕೊಳ್ಳುತ್ತಿದ್ದರು. ಅವರು ‘ಘಜ್ವಾ-ಎ-ಹಿಂದ್’ ಬಗ್ಗೆ ವೀಡಿಯೊಗಳು ಮತ್ತು ಭಾಷಣಗಳ ಮೂಲಕ ಯುವಕರನ್ನು ಮೂಲಭೂತವಾದಿಗಳನ್ನಾಗಿ ಮಾಡಲು ಪ್ರಯತ್ನಿಸಿದ್ದರು. ಈ ನಾಲ್ವರ ವಿಚಾರಣೆ ವೇಳೆ ಬೆಂಗಳೂರಿನಿಂದ ಕಾರ್ಯಾಚರಿಸುತ್ತಿರುವ ಸಮಾ ಪರ್ವೀನ್ ಬಗ್ಗೆ ಮಾಹಿತಿ ದೊರೆತಿದೆ.

ಶಂಕಿತ ಉಗ್ರರ ಬಂಧನದ ನಂತರ ಚೋದನಕಾರಿ, ಜಿಹಾದಿ ವಿಡಿಯೋಗಳನ್ನು ಪ್ರಸಾರ ಮಾಡುವ ಐದು ಇನ್‌ಸ್ಟಾಗ್ರಾಮ್ ಖಾತೆಗಳ ಮೇಲೆ ಎಟಿಎಸ್‌ ಕಟ್ಟಿತ್ತು. ಅವುಗಳನ್ನು ಒಬ್ಬನೇ ಆರೋಪಿ ನಿರ್ವಹಿಸುತ್ತಿರುವುದು ಗೊತ್ತಾಗಿತ್ತು. ಖಾತೆಯ ಮೂಲ ಪತ್ತೆಹಚ್ಚಿದ ನಂತರ, ಎಫ್‌ಎಸ್‌ಎಲ್ ಸೇರಿದಂತೆ ನಾಲ್ಕು ವಿಭಿನ್ನ ತಂಡಗಳನ್ನು ರಚಿಸಲಾಗಿತ್ತು. ನಂತರ ಎಟಿಎಸ್ ಅಧಿಕಾರಿಗಳು ಆರೋಪಿಗಳ ಬೆನ್ನತ್ತಿ ಬಂಧಿಸಿದ್ದರು.

Share News

About BigTv News

Check Also

ಆಟೋ ಗಲಾಟೆ: ದೇವಸ್ಥಾನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಸವರ್ಣೀಯರಿಂದ ಹಲ್ಲೆ

ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಗುರುಸಣಗಿ ಗ್ರಾಮದ ಸಿದ್ದಲಿಂಗೇಶ್ವರ ದೇವಸ್ಥಾನಕ್ಕೆ ದರ್ಶನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಕಲ್ಲು ಹಾಗೂ …

Leave a Reply

Your email address will not be published. Required fields are marked *