Breaking News

ಪಾಲಿಕೆಯ ಸಾಮಾನ್ಯ ಸಭೆಯಲ್ಲಿ ಮುಂದುವರಿದ ಗಲಾಟೆ: ಪಾಲಿಕೆ ಸದಸ್ಯೆ ಅಸ್ವಸ್ತ..!

ಹುಬ್ಬಳ್ಳಿ: ಸಾಮಾನ್ಯ ಸಭೆಯ ವೇಳೆ ಗಲಾಟೆಯಲ್ಲಿ ಪಾಲಿಕೆಯ ಕಾಂಗ್ರೆಸ್ ಸದಸ್ಯೆಯೊಬ್ಬರು ಅಸ್ವಸ್ಥಗೊಂಡಿರುವ ಘಟನೆ ನಡೆದಿದೆ.

ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಸಾಮಾನ್ಯ ಸಭೆಯಲ್ಲಿ ಅಭಿವೃದ್ಧಿ ವಿಷಯಕ್ಕೆ ಸಂಬಂಧಿಸಿದಂತೆ ವಿರೋಧ ಪಕ್ಷದ ಸದಸ್ಯರು ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆಯಲ್ಲಿ ಮಾರ್ಷಲ್ ಗಳು ಸದಸ್ಯರನ್ನು ಹೊರ ಹಾಕುತ್ತಿರುವ ಸಂದರ್ಭದಲ್ಲಿ ಪಾಲಿಕೆ ಸದಸ್ಯೆ ಅಸ್ವಸ್ಥಗೊಂಡಿದ್ದಾರೆ. ಹೌದು… ಪಾಲಿಕೆ ಸದಸ್ಯೆ ಸುವರ್ಣ ಕಲಕುಂಟ್ಲ ಅವರನ್ನು ಮಾರ್ಷಲ್ ಗಳು ಹೊತ್ತುಕೊಂಡು ಬರುತ್ತಿರುವ ವೇಳೆಯಲ್ಲಿ ಕೆಳಗೆ ಬಿದ್ದಿರುವ ಸುವರ್ಣ ಕಲಕುಂಟ್ಲ ಅವರು ಅಸ್ವಸ್ಥಗೊಂಡಿದ್ದು, ಘಟನೆ ವಿರುದ್ಧ ಪಾಲಿಕೆ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದರು.

ಇನ್ನೂ ಸ್ಥಳಕ್ಕೆ ಆಗಮಿಸಿದ ಪಾಲಿಕೆ ವೈದ್ಯರ ತಂಡ ಆರೋಗ್ಯ ತಪಾಸಣೆ ನಡೆಸಿದ್ದಾರೆ. ಅಲ್ಲದೇ ಅಸ್ವಸ್ಥಗೊಂಡಿದ್ದ ಪಾಲಿಕೆ ಸದ್ಯಸ್ಯೆಯನ್ನು ಸದನದಲ್ಲಿಯೇ ಆರೈಕೆ ಮಾಡಲು ಮುಂದಾಗಿದ್ದಾರೆ.

ಒಟ್ಟಿನಲ್ಲಿ ಪಾಲಿಕೆಯ ನೂತನ ಮೇಯರ್ ಉಪಮೇಯರ್ ಅವರ ಮೊದಲ ಸಾಮಾನ್ಯ ಸಭೆಯಲ್ಲಿ ಗಲಾಟೆ ನಡೆದು, ಬಹುದೊಡ್ಡ ಗೊಂದಲ ಉಂಟಾಗಿದೆ…

Share News

About BigTv News

Check Also

ಬೆಂಗಳೂರು: ಪಬ್‌ನಲ್ಲಿ ಲೈಟರ್ ಕೇಳಿ ಪರಿಚಯವಾದ ರಾಜಸ್ಥಾನದ ಯುವತಿಯ ಹೋಟೆಲ್‌ಗೆ ಕರೆದೊಯ್ದು ಅತ್ಯಾಚಾರ ಎಸಗಿದ ಆರೋಪಿಯ ಬಂಧನ

ಬೆಂಗಳೂರು: ರಾಜಸ್ಥಾನದ ಜೈಪುರದಿಂದ ಬೆಂಗಳೂರಿಗೆ ಬಂದಿದ್ದ ಯುವತಿಯೊಬ್ಬರಿಗೆ ಕೋರಮಂಗಲದ ಪಬ್‌ನಲ್ಲಿ ಸಮೀರ್ ಎಂಬಾತ ಪರಿಚಯವಾಗಿದ್ದಾನೆ. ಸಿಗರೇಟ್ ಸೇದಲು ಲೈಟರ್ ಕೇಳಿದಾಗ …

Leave a Reply

Your email address will not be published. Required fields are marked *