Breaking News

ಧರ್ಮಸ್ಥಳ| ದೂರುದಾರ ಗುರುತಿಸಿದ ಸ್ಥಳದಲ್ಲಿ ಹರಿದ ಕೆಂಪು ಬ್ಲೌಸ್, ಪಾನ್ ಕಾರ್ಡ್, ಎಟಿಎಂ ಕಾರ್ಡ್ ಪತ್ತೆ; ಸುಜಾತಾ ಭಟ್ ಪರ ವಕೀಲರು

ಧರ್ಮಸ್ಥಳ ದೂರಿಗೆ ಸಂಬಂಧಿಸಿದಂತೆ ಸಾಕ್ಷಿ ದೂರುದಾರ ಗುರುತು ಪಡಿಸಿದ ಸ್ಥಳಗಳ ಪೈಕಿ ಮೊದಲನೇ ಗುರುತಿನ ಸ್ಥಳವನ್ನು ಅಗೆಯುವ ವೇಳೆ ಸೈಟ್ ಸಂಖ್ಯೆ 1ರಲ್ಲಿ ವಿಶೇಷ ತನಿಖಾ ತಂಡ(ಎಸ್‌ಐಟಿ)ವು ಮಹತ್ವದ ಸಾಕ್ಷ್ಯಗಳನ್ನು ಪತ್ತೆ ಹಚ್ಚಿದೆ ಎಂದು ಧರ್ಮಸ್ಥಳದಲ್ಲಿ ಕಾಣೆಯಾಗಿದ್ದಾರೆ ಎನ್ನಲಾದ ವೈದ್ಯಕೀಯ ವಿದ್ಯಾರ್ಥಿನಿ ಅನನ್ಯಾ ಭಟ್ ಅವರ ತಾಯಿ ಸುಜಾತಾ ಭಟ್ ಅವರ ಪರ ವಕೀಲ ಮಂಜುನಾಥ್ ಎನ್ ಅವರು ತಿಳಿಸಿದ್ದಾರೆ.ಇದುವರೆಗೆ ಎಸ್‌ಐಟಿಯು ಪ್ರದರ್ಶಿಸಿರುವ ಗಂಭೀರತೆ, ಶಿಸ್ತು ಮತ್ತು ಕಾರ್ಯದಕ್ಷತೆ ನಮಗೆ ಭರವಸೆಯನ್ನು ಹುಟ್ಟುಹಾಕಿದೆ. ಮುಂದಿನ ಸ್ಥಳಗಳ ಪರಿಶೀಲನೆಯ ವೇಳೆ ನಾವು ಅವರ ಕೆಲಸಗಳಲ್ಲಿ ಸಂಪೂರ್ಣ ನಂಬಿಕೆಯನ್ನು ಇಡುತ್ತೇವೆ ಎಂದು ವಕೀಲ ಮಂಜುನಾಥ್ ಎನ್ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Share News

About BigTv News

Check Also

ಪ್ರೇಯಸಿ ಕರೆದಿದ್ದಕ್ಕೆ ಬಂದ ಯುವಕ ಸಿಕ್ಕಿಬಿದ್ದ: ಸ್ನೇಹಿತರ ಸಮೇತ ಕಂಬಕ್ಕೆ ಕಟ್ಟಿ ಥಳಿಸಿದ ಗ್ರಾಮಸ್ಥರು!

ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಬತ್ತಿಕೊಪ್ಪ ಗ್ರಾಮದಲ್ಲಿ ಪ್ರೀತಿಸಿದ ಯುವತಿಯನ್ನು ಮದುವೆಯಾಗಲು ಬಂದ ಪ್ರಮೋದ್ ಹಾಗೂ ಆತನ ಸ್ನೇಹಿತರಾದ ಪ್ರಕಾಶ್, …

Leave a Reply

Your email address will not be published. Required fields are marked *