ಮಹಾರಾಷ್ಟ್ರ ಭಾಗದಲ್ಲಿ ನಿರಂತರ ಮಳೆಯಾಗುತ್ತಿರುವ ಕಾರಣ ಯಾದಗಿರಿ ನಗರದ ಹೊರ ಭಾಗದಲ್ಲಿ ಹರಿಯುವ ಭೀಮಾ ನದಿಗೆ ಅಪಾರ ಪ್ರಮಾಣದಲ್ಲಿ ನೀರು ಹರಿದುಬರುತ್ತಿದೆ. ಭೀಮಾ ನದಿ ಮೈದುಂಬಿಕೊಂಡು ಹರಿಯುತ್ತಿದ್ದು, ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಸದ್ಯ ಮುಳುಗಡೆಯಾಗಿರುವ ಕಾರಣ ಭಕ್ತರಿಗೆ ದರ್ಶನ ಭಾಗ್ಯ ಸಿಗುತ್ತಿಲ್ಲ. ಶ್ರಾವಣ ಮಾಸ ಹಿನ್ನಲೆ ನಿತ್ಯ ದೇವಸ್ಥಾನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಬರುತ್ತಾರೆ.ವಡಗೇರ ತಾಲೂಕಿನ ಗುರುಸಣಿ ಬ್ಯಾರೇಜ್ ನಿಂದ 40 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದ್ದು, ನದಿಯ ಎರಡು ಬದಿಯ ಗ್ರಾಮಸ್ಥರಲ್ಲಿ ಪ್ರವಾಹದ ಆತಂಕ ಉಂಟಾಗಿದೆ. ನದಿ ದಡಕ್ಕೆ ತೆರಳದಂತೆ ಜಿಲ್ಲಾಡಳಿತದಿಂದ ಸೂಚನೆ ನೀಡಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

