ರಾಜ್ಯದಲ್ಲಿ ರೈತರಿಗೆ ಸಮರ್ಪಕವಾಗಿ ರಸಗೊಬ್ಬರ ಪೂರೈಕೆ ಮಾಡದಿರುವುದನ್ನು ಖಂಡಿಸಿ ಬೀದರ್ ದಕ್ಷಿಣ ಕ್ಷೇತ್ರದ ಬಿಜೆಪಿ ಮಂಡಲ ವತಿಯಿಂದ ತಾಲ್ಲೂಕಿನ ಮನ್ನಾಏಖೇಳ್ಳಿ ಗ್ರಾಮದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.ಬಸವೇಶ್ವರ ವೃತ್ತದಲ್ಲಿ ಪ್ರತಿಭಟನಕಾರರು ರಸ್ತೆ ತಡೆ ಮಾಡಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ನಂತರ ಪಕ್ಷದ ಪ್ರಮುಖರು ಮಾತನಾಡಿ,’ಕೇಂದ್ರ ಸರ್ಕಾರ ರಸಗೊಬ್ಬರ ಪೂರೈಕೆ ಮಾಡುತ್ತಿಲ್ಲ ಎಂದು ರಾಜ್ಯ ಸರ್ಕಾರ ಸುಳ್ಳು ಹೇಳುತ್ತಿದೆ. ಕೇಂದ್ರದಿಂದ ರಾಜ್ಯ ಸರ್ಕಾರಕ್ಕೆ 8.70 ಲಕ್ಷ ಮೆಟ್ರಿಕ್ ಟನ್ ಯೂರಿಯಾ ಗೊಬ್ಬರ ಸರಬರಾಜು ಆಗಿದೆ. ಈಗ 5.25 ಲಕ್ಷ ಮೆಟ್ರಿಕ್ ಟನ್ ಯೂರಿಯಾ ಮಾತ್ರ ರಾಜ್ಯದ ಮಾರುಕಟ್ಟೆಯಲ್ಲಿ ಇದೆ. ಉಳಿದ 2.50 ಲಕ್ಷ ಮೆಟ್ರಿಕ್ ಟನ್ ಗೊಬ್ಬರ ಏನಾಗಿದೆ ಎಂಬುದು ಸರ್ಕಾರ ರೈತರಿಗೆ ಸ್ಪಷ್ಟಪಡಿಸಬೇಕು’ ಎಂದು ಆಗ್ರಹಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

