ಮಕ್ಕಳನ್ನು ತಿದ್ದಿ ತೀಡಬೇಕಾದ ಶಿಕ್ಷಕರೇ ಇಷ್ಟು ಕ್ರೂರಿಗಳಾದರೆ ಹೇಗೆ? ಎಲ್ಲಾ ವಿದ್ಯಾರ್ಥಿಗಳು ಒಂದೇ ರೀತಿ ಇರುವುದಿಲ್ಲ, ಹಾಗೆಯೇ ಬರವಣಿಗೆ ಕೂಡ ಭಿನ್ನವಾಗಿರುತ್ತದೆ. ಅವರನ್ನು ತಿದ್ದುವುದಕ್ಕಾಗಿಯೇ ಶಿಕ್ಷಕರು ಇರುವುದು. ಆದರೆ ಹ್ಯಾಂಡ್ರೈಟಿಂಗ್ ಚೆನ್ನಾಗಿಲ್ಲವೆಂದು ಕೈ ಸುಟ್ಟಿರುವ ಹೃದಯ ವಿದ್ರಾವಕ ಘಟನೆ ಮುಂಬೈನಲ್ಲಿ ಬೆಳಕಿಗೆ ಬಂದಿದೆ.ಮುಂಬೈನ ಮಲಾಡ್ ಪ್ರದೇಶದ ಖಾಸಗಿ ಟ್ಯೂಷನ್ ಶಿಕ್ಷಕಿ ವಿದ್ಯಾರ್ಥಿಗಳ ಮೇಲೆ ದೌರ್ಜನ್ಯವೆಸಗಿದ್ದಾರೆ. ಎಂಟು ವರ್ಷದ ಬಾಲಕನ ಕೈಯನ್ನು ಸುಟ್ಟು ಹಾಕಿರುವ ಆರೋಪದ ಮೇಲೆ ಶಿಕ್ಷಕಿಯನ್ನು ಬಂಧಿಸಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

