ನಾನು ಸಾಯ್ತೀನಿ, ಇಲ್ಲದಿದ್ದರೆ ಅವರೇ ನನ್ನನ್ನು ಸಾಯಿಸುತ್ತಾರೆ ಎಂದು ತಾಯಿಗೆ ಮೆಸೇಜ್ ಕಳುಹಿಸಿ ಗರ್ಭಿಣಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೇರಳದ ತ್ರಿಶೂರ್ನಲ್ಲಿ ನಡೆದಿದೆ.ತ್ರಿಶೂರ್ ಜಿಲ್ಲೆಯ ವೆಲ್ಲಂಗುಲರ್ನಲ್ಲಿರುವ ತನ್ನ ಪತಿಯ ಮನೆಯಲ್ಲಿ ಫಸೀಲಾ ಎಂಬ ಮಹಿಳೆ ನೇಣಿಗೆ ಶರಣಾಗಿದ್ದಾರೆ.ಆತ್ಮಹತ್ಯೆಗೆ ಪ್ರಚೋದನೆ ಮತ್ತು ಇತರೆ ಸಂಬಂಧಿತ ಸೆಕ್ಷನ್ಗಳಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ತ್ರಿಶೂರ್ನ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಬಳಿಕ ಶವವನ್ನು ಕುಟುಂಬಕ್ಕೆ ಹಸ್ತಾಂತರಿಸಲಾಯಿತು.
bigtvnews | Hubli Dharwad News | Kannada News | Karnataka News Hubli News | News In Hubli | Local news

