Breaking News

ಹುಬ್ಬಳ್ಳಿಯಲ್ಲಿ ಮುಂದುವರಿದ ಮಹದಾಯಿ ಹೋರಾಟ: ರಸ್ತೆ ತಡೆದು ಬೃಹತ್ ಪ್ರತಿಭಟನೆ..!

ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಮಹದಾಯಿ ಹೋರಾಟ ಮುಂದುವರಿದಿದೆ. ಈ ಭಾಗದ ಬಹುಬೇಡಿಕೆಯ ಯೋಜನೆಗೆ ರೈತ ಹೋರಾಟಗಾರರು ಮುಂದಾಗಿದ್ದು, ರಸ್ತೆ ತಡೆದು ವಿನೂತನ ಪ್ರತಿಭಟನೆ ನಡೆಸುವ ಮೂಲಕ ಕೇಂದ್ರ ಸರ್ಕಾರಕ್ಕೆ ಬಿಸಿ ಮುಟ್ಟಿಸುವ ಕಾರ್ಯಕ್ಕೆ ಮುಂದಾಗಿದ್ದಾರೆ. ಮಹದಾಯಿ ಹೋರಾಟ ಇದು ನಿನ್ನೆ ಮೊನ್ನೆಯದಲ್ಲ. ರೈತರಿಗೆ ಮಾತ್ರವೇ ಇರುವ ಯೋಜನೆಯಂತೂ ಅಲ್ಲವೇ ಅಲ್ಲ. ಹುಬ್ಬಳ್ಳಿ ಧಾರವಾಡ ಅವಳಿನಗರದ ಜನರ ಕುಡಿಯುವ ನೀರಿನ ಭವಣೆ ನೀಗಿಸುವ ಮಹತ್ವದ ಯೋಜನೆ. ಈ ಯೋಜನೆಯ ಹೋರಾಟ ಈಗ ಹೊಸ ಸ್ವರೂಪವನ್ನು ಪಡೆದುಕೊಂಡಿದ್ದು, ಹುಬ್ಬಳ್ಳಿಯ ಲ್ಯಾಮಿಂಗ್ಟನ್ ರಸ್ತೆ ತಡೆದು ಕಳಸಾ ಬಂಡೂರಿ, ಮಹದಾಯಿ ಹಾಗೂ ರೈತ ಹೋರಾಟಗಾರರು ಪ್ರತಿಭಟನೆ ನಡೆಸುವ ಮೂಲಕ ಕೇಂದ್ರ ಸರ್ಕಾರ ಹಾಗೂ ಕೇಂದ್ರ ಸಚಿವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಮಹದಾಯಿ ನೀರಿಗಾಗಿ ಕಳೆದ ಸರಿಸುಮಾರು 10 ವರ್ಷದಿಂದ ನಿರಂತರ ಧರಣಿ ನಡೆಸುತ್ತಿರುವ ರೈತಸೇನೆ, ಮಹದಾಯಿ, ಕಳಸಾ ಬಂಡೂರಿ, ಕನ್ನಡಪರ ಸಂಘಟನೆಗಳು ಹೋರಾಟ ಮಾಡುತ್ತಲೇ ಬಂದಿದೆ. ಆದರೆ ಈಗ ಮಹದಾಯಿ ಹೋರಾಟಗಾರರು ವಿನೂತನ ರೀತಿಯಲ್ಲಿ ಧರಣಿ ನಡೆಸಲು ಮುಂದಾಗಿದ್ದಾರೆ. 2018ರಲ್ಲೇ ನ್ಯಾಯಾಧೀಕರಣ ತೀರ್ಪು ನೀಡಿದೆ. ಕೇಂದ್ರ ಸರ್ಕಾರವೂ ಅದಕ್ಕೆ ಗೆಜೆಟ್‌ ನೋಟಿಫಿಕೇಶನ್ ಕೂಡ ಮಾಡಿದೆ. ಆದರೆ ಈವರೆಗೂ ಕೇಂದ್ರ ಸರ್ಕಾರದ ಅರಣ್ಯ ಮತ್ತು ಪರಿಸರ ಸಚಿವಾಲಯದಿಂದ ಅನುಮತಿ ಸಿಗುತ್ತಿಲ್ಲ. ಇದಕ್ಕೆ ಕಾರಣ ಕೇಂದ್ರ ಸರ್ಕಾರ ಕೊಡುತ್ತಿಲ್ಲ. ಮಹದಾಯಿಯಲ್ಲಿ ನಿರ್ಲಕ್ಷ್ಯ ತೋರಿದ ಈ ಭಾಗದ ಕೇಂದ್ರ ಸಚಿವರು ರಾಜೀನಾಮೆ ನೀಡಬೇಕು ಎಂದು ರೈತ ಮುಖಂಡರು ಆಗ್ರಹಿಸಿದ್ದಾರೆ

Share News

About BigTv News

Check Also

ಬೆಂಗಳೂರಲ್ಲಿ ನಕಲಿ ಡೇಟಿಂಗ್ ಬಲೆ, 20 ಲಕ್ಷ ರೂ. ಮೌಲ್ಯದ ಚಿನ್ನ ಲೂಟಿ

ಬೆಂಗಳೂರು: ಚಂದ್ರಾ ಲೇಔಟ್‌ನಲ್ಲಿ ಡೇಟಿಂಗ್ ಆಯಪ್ ಮೂಲಕ ಪರಿಚಯವಾದ ವ್ಯಕ್ತಿಯನ್ನು ಮನೆಗೆ ಕರೆಸಿಕೊಂಡ ಯುವಕನಿಗೆ ಚಾಕು ತೋರಿಸಿ ಬೆದರಿಸಿ, 226 …

Leave a Reply

Your email address will not be published. Required fields are marked *