ಧರ್ಮಸ್ಥಳದಲ್ಲಿನ ಕೊಲೆಯಾದ ನೂರಾರು ಶವಗಳನ್ನು ಹೂತಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಈ ಪ್ರಕರಣ ಸಂಬಂಧ ಮಾಧ್ಯಮಗಳ ಮೇಲಿನ ನಿರ್ಬಂಧವನ್ನು ರದ್ದುಗೊಳಿಸಿ ಆದೇಶಿಸಿದೆ.ಇನ್ನೂ ವಿಚಾರಣಾಧೀನ ನ್ಯಾಯಾಲಯವು ಈ ಆದೇಶವನ್ನು ಮಾಡಿರುವ ಅಂಶಗಳನ್ನು ಗಮನದಲ್ಲಿ ಇಟ್ಟುಕೊಳ್ಳಬೇಕು. ಸಕ್ಷಮ ನ್ಯಾಯಾಲಯವು ಮಧ್ಯಂತರ ಅರ್ಜಿಯನ್ನು ತುರ್ತಾಗಿ ನಿರ್ಧರಿಸಬೇಕು ಎಂಬುದಾಗಿ ತೀರ್ಪಿನಲ್ಲಿ ಉಲ್ಲೇಖಿಸಿ ಆದೇಶಿಸಿದೆ.
ಇದೇ ಸಂದರ್ಭದಲ್ಲಿ ಸಿವಿಲ್ ದಾವೆ, ಕ್ರಿಮಿನಲ್ ಪ್ರಕ್ರಿಯೆ, ಆರೋಪ, ಪ್ರತ್ಯಾರೋಪದ ಮೇಲೆ ಈ ನ್ಯಾಯಲಯವು ಯಾವುದೇ ಅಭಿಪ್ರಾಯ ವ್ಯಕ್ತಪಡಿಸುವುದಿಲ್ಲ. ಆದೇಶದಲ್ಲಿ ಪರಿಗಣಿಸಿರುವ ಒಂದು ಅಂಶವನ್ನು ಹೊರತುಪಡಿಸಿ ಪಕ್ಷಕಾರರ ನಡುವೆ ಎಲ್ಲಾ ವಾದಗಳನ್ನು ಮುಕ್ತವಾಗಿ ಇರಿಸಲಾಗಿದೆ ಎಂಬುದಾಗಿ ಹೈಕೋರ್ಟ್ ತಿಳಿಸಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

