ಪಶ್ಚಿಮ ವಲಯ ಮಹಾಲಕ್ಷ್ಮಿಪುರ ವಿಭಾದಲ್ಲಿ ಕಾರ್ಯನಿರ್ವಹಿಸುತ್ತಿದ್ದ 3 ಸಿಬ್ಬಂದಿಯನ್ನು ಕರ್ತವ್ಯ ಲೋಪವೆಸಗಿರುವ ಕಾರಣ ಕರ್ತವ್ಯದಿಂದ ಬಿಡುಗಡೆಗೊಳಿಸಲಾಗಿದೆ.ನೌಕರರು ತಮ್ಮ ಕರ್ತವ್ಯದಲ್ಲಿ ತೀವ್ರ ನಿರ್ಲಕ್ಷ್ಯತನ ಮತ್ತು ಬೇಜವಾಬ್ದಾರಿತನ ತೋರಿಸಿರುವುದರಿಂದ ಹಾಗೂ ಸದರಿ ನೌಕರರ ಸೇವೆಯು ತೃಪ್ತಿಕರವಾಗಿರದೇ ಇರುವುದರಿಂದ ಸಾರ್ವಜನಿಕರ ಮತ್ತು ಆಡಳಿತ ಹಿತದೃಷ್ಠಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ವಾರ್ಡ್-102 ಕರ್ತವ್ಯದಿಂದ ಬಿಡುಗಡೆಗೊಳಿಸಿ ಪಶ್ಚಿಮ ವಲಯ ಆಯುಕ್ತರಾದ ಸುರಳ್ಕರ್ ವಿಕಾಸ್ ಕಿಶೋರ್ ಅದೇಶಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

