Breaking News

ಮೊಮ್ಮಗ ಪ್ರಜ್ವಲ್‌ಗೆ ಜೀವಾವಧಿ ಶಿಕ್ಷೆ ನೋಡಿ ಕಣ್ಣೀರಿಟ್ಟ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ!

ಅತ್ಯಾಚಾರ ಪ್ರಕರಣದಲ್ಲಿ ಹಾಸನ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣಗೆ ಜನಪ್ರತಿನಿಧಿ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. 376(2)(n) ಸೆಕ್ಷನ್‌ನಲ್ಲಿ ಜೀವಾವಧಿ ಶಿಕ್ಷೆ ನೀಡಲಾಗಿದ್ದರೆ, 354(b) ಸೆಕ್ಷನ್‌ ಅಡಿಯಲ್ಲಿ 3 ವರ್ಷ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಲಾಗಿದೆ.ಕಠಿಣ ಕಾರಾಗೃಹ ಶಿಕ್ಷೆ ಮತ್ತು ದಂಡ ಪಡೆದಿರುವ ಸೆಕ್ಷನ್‌ಗಳನ್ನು ನೋಡುವುದಾದರೆ, ಐಪಿಸಿ 354(a) 3 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು ₹25,000 ದಂಡ, ಐಪಿಸಿ 354(b) 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು ₹50,000 ದಂಡ. (ದಂಡ ಪಾವತಿಸದಿದ್ದಲ್ಲಿ ಹೆಚ್ಚುವರಿ 6 ತಿಂಗಳು ಸರಳ ಜೈಲು ಶಿಕ್ಷೆ), ಐಪಿಸಿ 354(c) 3 ವರ್ಷ ಕಠಿಣ ಕಾರಾಗೃಹ ಶಿಕ್ಷೆ, ಐಪಿಸಿ 201 ಪ್ರಕಾರ 3 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು ₹25,000 ದಂಡ, ಐಟಿ ಕಾಯ್ದೆ 66(E) 3 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು ₹25,000 ದಂಡ ವಿಧಿಸಲಾಗಿದೆ.

ಇದರೊಂದಿಗೆ ಐಪಿಸಿ 506 ಸೆಕ್ಷನ್‌ ಅಡಿಯಲ್ಲಿ 2 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು ₹10,000 ದಂಡ ವಿಧಿಸಲಾಗಿದೆ. ನ್ಯಾಯಾಲಯವು ಸಂತ್ರಸ್ತೆಗೆ ₹11 ಲಕ್ಷ ಪರಿಹಾರ ನೀಡುವಂತೆ ಆದೇಶಿಸಿದೆ.

Share News

About BigTv News

Check Also

ಸಿಲಿಂಡರ್ ಸ್ಫೋಟಗೊಂಡು 20ಕ್ಕೂ ಹೆಚ್ಚು ಕಾರ್ಮಿಕರ ಶೆಡ್‌ಗಳು ಭಸ್ಮ!

ಕಲಬುರಗಿ ಜಿಲ್ಲೆಯ ಹೊನ್ನಕಿರಣಗಿ ಗ್ರಾಮದ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದಲ್ಲಿರುವ ಗುಲ್ಬರ್ಗಾ ಸಿಮೆಂಟ್ ಕಾರ್ಖಾನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಭಾರೀ ಅಗ್ನಿ …

Leave a Reply

Your email address will not be published. Required fields are marked *