Breaking News

ಬೈಂದೂರು: ಸಮುದ್ರದ ಅಲೆಗಳ ಅಬ್ಬರಕ್ಕೆ ಮಗುಚಿದ ದೋಣಿ ; ಜೀವರಕ್ಷಿಸಿದ ಲೈಫ್ ಜಾಕೇಟ್

ಸಮುದ್ರದ ಭಾರೀ ಅಲೆಗೆ ಸಿಲುಕಿದ ಮೀನುಗಾರಿಕಾ ದೋಣಿಯೊಂದು ಮಗುಚಿ ಬಿದ್ದಿದ್ದು, ಇದರಲ್ಲಿದ್ದ 9 ಮೀನುಗಾರರು ಲೈಫ್ ಜಾಕೇಟ್ ಧರಿಸಿದ್ದರಿಂದ ಅಪಾಯದಿಂದ ಪಾರಾಗಿ ದಡ ಸೇರಿದ ಘಟನೆ ಬೈಂದೂರು ತಾಲೂಕಿನ ಉಪ್ಪುಂದ ಮಡಿಕಲ್ ಎಂಬಲ್ಲಿ ರವಿವಾರ ಬೆಳಗ್ಗೆ ನಡೆದಿದೆ.ಇದರಿಂದ ದೋಣಿಯಲ್ಲಿದ್ದ ಎಲ್ಲ 9 ಮಂದಿ ಮೀನುಗಾರರು ಕೂಡ ನೀರಿಗೆ ಬಿದ್ದರು. ಎಲ್ಲ ಮೀನುಗಾರರು ಲೈಪ್ ಜಾಕೆಟ್ ಧರಿಸಿದ್ದರಿಂದ ಸಮುದ್ರದಲ್ಲಿ ಈಜುತ್ತಿದ್ದರು. ಕೂಡಲೇ ದಡದಲ್ಲಿದ್ದ ಇತರೆ ಮೀನುಗಾರರು ರೋಪ್ ನೀಡಿ ಅವರನ್ನು ಸುರಕ್ಷಿತವಾಗಿ ದಡ ಸೇರಿದರು. ದೋಣಿ ಮಗುಚಿದ ರಭಸಕ್ಕೆ ದೋಣಿಗೆ ಹಾನಿಯಾಗಿದ್ದಲ್ಲದೆ ಎಂಜಿನ್, ದೋಣಿಯಲ್ಲಿದ್ದ ಬಲೆ ಹಾಗೂ ಲಕ್ಷಾಂತರ ರೂ. ಮೌಲ್ಯದ ಸಲಕರಣೆಗಳು ನಷ್ಟವಾಗಿದೆ ಎಂದು ತಿಳಿದು ಬಂದಿದೆ.

Share News

About BigTv News

Check Also

ರೀಲ್ಸ್ ಲೋಕದ ಚೆಲುವೆ ಶವವಾಗಿ ಪತ್ತೆ : ಅತ್ತ ಗಂಡ ವಶಕ್ಕೆ, ಇತ್ತ ಕಂದನ ಆಕ್ರಂದನ.. ಏನಾಯ್ತು..?

ತುಮಕೂರು: ತಾಲೂಕಿನ ಯಲ್ಲಾಪುರ ಗ್ರಾಮದಲ್ಲಿ 24 ವರ್ಷದ ಸುಷ್ಮಿತಾ ಎಂಬ ಯುವತಿ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದು, ಎರಡೂವರೆ …

Leave a Reply

Your email address will not be published. Required fields are marked *