Breaking News

ನಾಳೆ ಬೆಳಗ್ಗೆಯಿಂದ ಸಾರಿಗೆ ಬಸ್ ಬಂದ್, ಸಿಎಂ ಸಿದ್ದರಾಮಯ್ಯ-ನೌಕರರ ಸಂಧಾನ ವಿಫಲ

ಸಾರಿಗೆ ನೌಕರರು ಹಾಗೂ ಸರ್ಕಾರದ ನಡುವಿನ ಜಟಾಪಟಿ ತೀವ್ರಗೊಂಡಿದೆ. ಸಿಎಂ ಸಿದ್ದರಾಮಯ್ಯ ಕರೆದಿದ್ದ ಸಂಧಾನ ಸಭೆಯೂ ವಿಫಲಗೊಂಡಿರುವ ಹಿನ್ನಲೆಯಲ್ಲಿ ನಾಳೆಯಿಂದ ಸಾರಿಗೆ ನೌಕರರ ಮುಷ್ಕರ ಆರಂಭಗೊಳ್ಳಲಿದೆ. ಹೀಗಾಗಿ ನಾಳೆ ಬೆಳಗ್ಗೆಯಿಂದ ಸಾರಿಗೆ ಬಸ್ ಸೇವೆ ಲಭ್ಯವಿರುವುದಿಲ್ಲ.ಎಸ್ಮಾ ಜಾರಿ, ಸಾರಿಗೆ ನೌಕರರ ರಜಾ ರದ್ದು ಸೇರಿದಂತೆ ಹಲವು ಕಟ್ಟು ನಿಟ್ಟಿನ ಕ್ರಮಗಳನ್ನು ಸರ್ಕಾರ ಕೈಗೊಂಡರೂ ಯಾವುದಕ್ಕೂ ಕ್ಯಾರೇ ಅನ್ನದ ಸಾರಿಗೆ ನೌಕರರು ನಾಳೆಯಿಂದ ಮುಷ್ಕರ ಆರಂಭಿಸಲಿದ್ದಾರೆ.

38 ತಿಂಗಳ ಬಾಕಿ ವೇತನ 1800 ಕೋಟಿ ರೂಪಾಯಿ ತಕ್ಷಣವೇ ಬಿಡುಗಡೆ ಮಾಡುವಂತೆ ಸಾರಿಗಗೆ ನೌಕರರ ಸಲ್ಲಿಸಿದ್ದ ಮನವಿಗೆ ಸ್ಪಂದಿಸಿದ ಕಾರಣ ಸಾರಿಗೆ ನೌಕರರು ಮುಷ್ಕರ ಘೋಷಿಸಿದ್ದರು. ನಾಳೆಯಿಂದ ಮುಷ್ಕರ ಆರಂಭದ ಹಿನ್ನಲೆಯಲ್ಲಿ ಸಿಎಂ ಸಿದ್ದರಾಮಯ್ಯ ಸಾರಿಗೆ ನೌಕರರ ಜೊತೆ ಮಹತ್ವದ ಸಭೆ ಕರೆದಿದ್ದರು. ಈ ಸಭೆಯಲ್ಲೂ 38 ತಿಂಗಳ ಬಾಕಿ ವೇತನ ನೀಡಲು ಸಿಎಂ ಸಿದ್ದರಾಮಯ್ಯ ಒಪ್ಪಿಕೊಂಡಿಲ್ಲ. ಹೀಗಾಗಿ ಸಂಧಾನ ವಿಫಲಗೊಂಡಿದೆ. ನಾಳೆಯಿಂದ ಮುಷ್ಕರ ಆರಂಭದ ಹಿನ್ನಲೆಯಲ್ಲಿ ಸಿಎಂ ಸಿದ್ದರಾಮಯ್ಯ ಸಾರಿಗೆ ನೌಕರರ ಜೊತೆ ಮಹತ್ವದ ಸಭೆ ಕರೆದಿದ್ದರು. ಈ ಸಭೆಯಲ್ಲೂ 38 ತಿಂಗಳ ಬಾಕಿ ವೇತನ ನೀಡಲು ಸಿಎಂ ಸಿದ್ದರಾಮಯ್ಯ ಒಪ್ಪಿಕೊಂಡಿಲ್ಲ. ಹೀಗಾಗಿ ಸಂಧಾನ ವಿಫಲಗೊಂಡಿದೆ.

Share News

About BigTv News

Check Also

ಉಡುಪಿ: ಮದುವೆ ನಿರಾಕರಿಸಿದ ವ್ಯಕ್ತಿಯನ್ನು ಬೆದರಿಸಿ 42ಲಕ್ಷ ರೂ. ಹಣ ವಸೂಲಿ; ಶಿಕ್ಷಕಿ ಸಹಿತ ಇಬ್ಬರ ಬಂಧನ

ಉಡುಪಿ: ಮದುವೆ ಪ್ರಸ್ತಾಪ ನಿರಾಕರಿಸಿದ ವ್ಯಕ್ತಿಗೆ ಸುಳ್ಳು ಪ್ರಕರಣ ದಾಖಲಿಸುವುದಾಗಿ ಬೆದರಿಸಿ ₹42.97 ಲಕ್ಷ ವಸೂಲಿ ಮಾಡಿ ವಂಚಿಸಿದ ಆರೋಪದಲ್ಲಿ …

Leave a Reply

Your email address will not be published. Required fields are marked *