ಕೆಆರ್‌ಎಸ್ ಜಲಾಶಯಕ್ಕೆ ಟಿಪ್ಪು ಸುಲ್ತಾನ್ ಸಾಗರ ಎಂದು ಮರುನಾಮಕರಣ ಮಾಡಲು ಕಾಂಗ್ರೆಸ್ ಹುನ್ನಾರ ನಡೆಸುತ್ತಿದೆ ಎಂದು ರಾಜ್ಯ ಸರಕಾರದ ವಿರುದ್ಧ ವಿಪಕ್ಷ ನಾಯಕ ಆರ್.ಅಶೋಕ್ ಆಕ್ರೋಶ ವ್ಯಕ್ತಪಡಿಸಿದರು.ರಾಜ್ಯದಲ್ಲಿ ಕಾಂಗ್ರೆಸ್ ಗೌರವ ಉಳಿಯಬೇಕಾದರೆ ಕೂಡಲೇ ರಾಜ್ಯದ ಜನತೆ, ನಾಲ್ವಡಿ ಕುಟುಂಬಕ್ಕೆ ಕ್ಷಮಾಪಣೆ ಕೇಳಿ. ಹೀಗೆ ಮಾತನಾಡಿದರೆ ಜನರು ನಿಮ್ಮ ಪಕ್ಷವನ್ನು ಧೂಳೀಪಟ ಮಾಡುತ್ತಾರೆ. ತಕ್ಷಣವೇ ರಾಜಮನೆತನಕ್ಕೆ ಕ್ಷಮೆಯಾಚಿಸಿ ಗೌರವ ಉಳಿಸಿಕೊಳ್ಳಿ ಎಂದು ಆಗ್ರಹಿಸಿದರು.ಸುದ್ದಿಗೋಷ್ಠಿಯಲ್ಲಿ ಮಾಜಿ ಶಾಸಕ ಎಲ್.ನಾಗೇಂದ್ರ, ಬಿಜೆಪಿ ಜಿಲ್ಲಾಧ್ಯಕ್ಷ ಡಾ.ಇಂದ್ರೇಶ್, ಮುಖಂಡರಾದ ಇಂಡವಾಳು ಸಚ್ಚಿದಾನಂದ, ಅಶೋಕ್ ಜಯರಾಂ ಉಪಸ್ಥಿತರಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

