Breaking News

ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ

ವೇತನ ಹೆಚ್ಚಳ ಹಿಂಬಾಕಿ, ವೇತನ ಪರಿಷ್ಕರಣೆ ಸಂಬಂಧ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕೂ ನಿಗಮಗಳ ನೌಕರ ಸಂಘಟನೆಗಳು ಮತ್ತು ಸರ್ಕಾರದ ನಡುವೆ ಸೋಮವಾರ ನಡೆದ ಮಾತುಕತೆ ವಿಫಲವಾಗಿದೆ. ‘ನೌಕರರ ಬೇಡಿಕೆಯಂತೆ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ.ಕೇವಲ 14 ತಿಂಗಳ ಹಿಂಬಾಕಿ ನೀಡಲು ಸಿದ್ಧ’ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಆ ಹಿನ್ನೆಲೆಯಲ್ಲಿ ಸಾರಿಗೆ ನೌಕರರು ಮುಷ್ಕರ ನಡೆಸುವುದಾಗಿ ಘೋಷಿಸಿದರು.ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ನಿಗಮಗಳ ಆರ್ಥಿಕ ಪರಿಸ್ಥಿತಿ, ವೇತನ ಹೆಚ್ಚಳಕ್ಕೆ ಸಂಬಂಧಿಸಿ 2023ರ ಮಾರ್ಚ್‌ನಲ್ಲಿ ಹಿಂದಿನ ಸರ್ಕಾರ ಮಾಡಿರುವ ಆದೇಶದಲ್ಲಿನ ದೋಷಗಳ ಕುರಿತು ನೌಕರ ಸಂಘಟನೆ ಪ್ರಮುಖರಿಗೆ ತಿಳಿಸಿದರು.

Share News

About BigTv News

Check Also

68 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿದ ಆರೋಪ, ಕೆಎಎಸ್ ಅಧಿಕಾರಿ ವಿರುದ್ಧ ಎಫ್‌ಐಆರ್!

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್‌ಟಿಸಿ ಖಾತೆ ಬದಲಾವಣೆ …

Leave a Reply

Your email address will not be published. Required fields are marked *