Breaking News

ಸರ್ಕಾರ, ಸಾರಿಗೆ ನೌಕರರ ಚೆಲ್ಲಾಟ – ಸಾರ್ವಜನಿಕರಿಗೆ ಪರದಾಟ!

ಕೋರ್ಟ್ ತಡೆಯಾಜ್ಞೆಯ ನಡುವೆಯೂ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಇಂದು ಮುಂಜಾನೆಯಿಂದಲೇ ಸಾರಿಗೆ ನೌಕರರು ಮುಷ್ಕರ ನಡೆಸುತ್ತಿದ್ದಾರೆ. ಇನ್ನೊಂದೆಡೆ ಬಸ್ ಸಂಚಾರವಿಲ್ಲದೆ ಕೆಲಸಕ್ಕೆ ಹೋಗಬೇಕಾದ ಪ್ರಯಾಣಿಕರು ಪರದಾಡುತ್ತಿದ್ದಾರೆ.ಇಂದು ಬೆಳಗ್ಗೆ 6 ಗಂಟೆಯಿಂದಲೇ ಮುಷ್ಕರ ಆರಂಭವಾಗಿದ್ದು, ಸಾರಿಗೆ ನೌಕರರ ಮುಷ್ಕರ ವಿಷಯ ತಿಳಿಯದೆ ಬೆಳ್ಳಂಬೆಳಗ್ಗೆ ರಾಜ್ಯದ ವಿವಿದೆಡೆ ಬಸ್ ನಿಲ್ದಾಣಕ್ಕೆ ಬಂದಿರುವ ಪ್ರಯಾಣಿಕರು ಬಸ್‌ಗಾಗಿ ಕಾಯುತ್ತಾ ಕುಳಿತಿದ್ದಾರೆ.

ಅದರಲ್ಲೂ ಬೆಂಗಳೂರು, ಮಂಡ್ಯ, ಹಾಸನ್ ನಂತಹ ನಗರದಲ್ಲಿ ಬೆಳಗ್ಗೆಯಿಂದಲೇ ಬಂದ್ ಬಿಸಿ ತಟ್ಟಿದ್ದು, ಮೈಸೂರಿನಲ್ಲಿ ಬೆರಳೆಣಿಕೆಯಷ್ಟು ಮಾತ್ರ ಬಸ್ ಓಡಾಡುತ್ತಿದ್ದಾರೆ, ರಾತ್ರಿ ಪಾಳಿಯ ನೌಕರರಷ್ಟೇ ಕೆಲಸ ಮುಂದುವರಿಸಿದ್ದಾರೆ. ಇನ್ನು ಮಂಡ್ಯದಲ್ಲಿ ಕೂಡ ಮುಂಜಾನೆಯಿಂದಲೇ ಬಸ್ ಸಿಗದೆ ಜನ ಓಡಾಡುತ್ತಿದ್ದಾರೆ.

Share News

About BigTv News

Check Also

ಬೆಂಗಳೂರು | ಸಿಕ್ಕವರ ಮೇಲೆ ಮಚ್ಚು ಬೀಸಿದ ದುಷ್ಕರ್ಮಿಗಳು: ಎಂಟು ಮಂದಿಗೆ ಗಾಯ

ಬೆಂಗಳೂರು: ಮಾಸ್ಕ್ ಧರಿಸಿ ನಾಲ್ಕು ಬೈಕ್‌ಗಳಲ್ಲಿ ಬಂದಿದ್ದ ಎಂಟು ಮಂದಿ ದುಷ್ಕರ್ಮಿಗಳು ಉತ್ತರಹಳ್ಳಿ ಮುಖ್ಯರಸ್ತೆ ಹಾಗೂ ಅರಹಳ್ಳಿ ಗೇಟ್ ಬಳಿ …

Leave a Reply

Your email address will not be published. Required fields are marked *