Breaking News

ಸರ್ಕಾರಿ ಸಾರಿಗೆ ನೌಕರರ ಮುಷ್ಕರಕ್ಕೆ ಕೂಡಲೇ ಪರಿಹಾರ: ಬಿ.ವೈ.ವಿಜಯೇಂದ್ರ ಆಗ್ರಹ

ಸರ್ಕಾರಿ ಸಾರಿಗೆ ನೌಕರರ ಮುಷ್ಕರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೂಡಲೇ ಪರಿಹಾರ ನೀಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಆಗ್ರಹಿಸಿದ್ದಾರೆ.ಸರಕಾರಿ ಬಸ್ಸಿಲ್ಲದೆ ಕಾಲೇಜು, ಶಾಲಾ ವಿದ್ಯಾರ್ಥಿಗಳು ಪರದಾಡುತ್ತಿದ್ದಾರೆ . ಗ್ಯಾರಂಟಿ ಕಾರಣಕ್ಕಾಗಿ ಗ್ರಾಮೀಣ ಭಾಗದ ಬಸ್ ಓಡಾಟವನ್ನು ಕಡಿತಗೊಳಿಸಿದ್ದಾರೆ ಎಂದು ಬಿ ವೈ ವಿಜಯೇಂದ್ರ ಅವರು ಆಕ್ಷೇಪಿಸಿದರು.ಮುಷ್ಕರ ಈಗಾಗಲೇ ಪ್ರಾರಂಭವಾಗಿದೆ. ಸಂಬಂಧಿತರನ್ನು ಕರೆದು ಸಮಸ್ಯೆ ಪರಿಹರಿಸಬೇಕು ಎಂದು ಅವರು ತಿಳಿಸಿದರು. ವಿಪಕ್ಷ ನಾಯಕ ಆರ್.ಅಶೋಕ್, ಮಾಜಿ ಉಪ ಮುಖ್ಯಮಂತ್ರಿ ಮತ್ತು ಶಾಸಕ ಡಾ.ಸಿ.ಎನ್. ಅಶ್ವತ್ಥನಾರಾಯಣ್ ಅವರು ಉಪಸ್ಥಿತರಿದ್ದರು.

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *