ಆರ್ .ಅಶೋಕರ್ ಅವರೇ, ನಿಮ್ಮ ಪಕ್ಷದ ಅಧಿಕಾರಾವಧಿಯಲ್ಲಿ ರಚಿಸಿದ್ದ ಏಕಸದಸ್ಯ ಸಮಿತಿ ರೂ.718 ಕೋಟಿ ವೇತನಪರಿಷ್ಕರಣೆ ಬಾಕಿ ನೀಡಲು ಶಿಫಾರಸು ಮಾಡಿತ್ತು. ಆದರೆ ನಿಮ್ಮ ಸರ್ಕಾರ ವೇತನ ಪರಿಷ್ಕರಣೆ ಬಾಕಿಯನ್ನು ಪಾವತಿ ಮಾಡಿರಲಿಲ್ಲ. ಆ ವೇತನ ಪರಿಷ್ಕರಣೆ ಬಾಕಿಯನ್ನು ಪಾವತಿ ಮಾಡಲು ನಮ್ಮ ಸರ್ಕಾರ ಬದ್ದವಾಗಿದೆ. ನಮ್ಮ ಸರ್ಕಾರದ ಈ ನಿಲುವನ್ನು ಸಾರಿಗೆ ನೌಕರರಿಗೆ ತಿಳಿಸಿ ಮುಷ್ಕರ ಕೈಬಿಟ್ಟು ಮುಂದಿನ ದಿನಗಳಲ್ಲಿ ಮಾತುಕತೆ ಮುಂದುವರಿಸಬಹುದು ಎಂದು ಮನವಿ ಮಾಡಿದ್ದರೂ ನೌಕರರ ಸಂಘಟನೆಗಳು ಮುಷ್ಕರ ಹೂಡಿದ್ದಾರೆ.ಖುದ್ದಾಗಿ ಕರ್ನಾಟಕ ರಾಜ್ಯ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜೊತೆ ಮಾತುಕತೆ ನಡೆಸಿದ್ದೆ. ಇದಕ್ಕಿಂತ ಮೊದಲು ಸಾರಿಗೆ ಸಚಿವರಾದ ರಾಮಲಿಂಗಾ ರೆಡ್ಡಿಯವರೂ ಸಂಧಾನದ ಪ್ರಯತ್ನ ಮಾಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

