Breaking News

ಉತ್ತರಕಾಶಿಯಲ್ಲಿ ಭೀಕರ ಮೇಘಸ್ಫೋಟ!

ಖೀರಗಂಗಾ ನದಿಯ ಜಲಾನಯನ ಪ್ರದೇಶದಲ್ಲಿ ಮೇಘಸ್ಫೋಟ ಸಂಭವಿಸಿದ್ದರಿಂದ ದಿಢೀರ್‌ ಪ್ರವಾಹ ಕಂಡುಬಂದಿದೆ ಎಂದು ಸ್ಥಳೀಯರು ಹೇಳಿದ್ದಾರೆ.ಹರ್ಸಿಲ್‌ನಿಂದ ಸೇನೆಯ ತುಕಡಿಯೊಂದು ಘಟನಾ ಸ್ಥಳಕ್ಕೆ ತೆರಳಿ, ಪರಿಹಾರ ಕಾರ್ಯ ಕೈಗೊಂಡಿದೆ.ಪ್ರವಾಸಿಗರು ಸೇರಿ 100ಕ್ಕೂ ಹೆಚ್ಚು ಜನರು ಕಟ್ಟಡಗಳ ಅವಶೇಷಗಳಡಿ ಸಿಲುಕಿರಬಹುದು ಎಂದು ಮೂಲಗಳು ಹೇಳಿದ್ದು, 20-25 ಹೋಟೆಲ್‌ಗಳು/ಹೋಂ ಸ್ಟೇಗಳು ಕೊಚ್ಚಿಕೊಂಡು ಹೋಗಿವೆ.ಪ್ರವಾಹದಿಂದಾಗಿ ನೀರು ಗ್ರಾಮಕ್ಕೆ ನುಗ್ಗುತ್ತಿರುವುದು ಹಾಗೂ ಮನೆಗಳಿಗೆ ಹಾನಿಯಾಗುತ್ತಿರುವುದನ್ನು ತೋರಿಸುವ ವಿಡಿಯೊಗಳು ವ್ಯಾಪಕವಾಗಿ ಹಂಚಿಕೆಯಾಗಿವೆ.ಧಾರಾಲಿ ಪ್ರದೇಶದಲ್ಲಿ ಭಾರಿ ಮಳೆ ಬೀಳುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿರುವ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ರೆಡ್‌ ಅಲರ್ಟ್‌ ಘೋಷಿಸಿದೆ.

Share News

About BigTv News

Check Also

ಅತ್ಯಾಚಾರ ಎಸೆಗಿದವರ ಮೇಲೆ‌ ಪ್ರತೀಕಾರ – ಅಪಹರಣ ಮಾಡಿ ಸಿಕ್ಕಿಬಿದ್ದ ಆರೋಪಿಗಳು!

ಬೆಂಗಳೂರು: ಮಾರತ್ತಹಳ್ಳಿಯಲ್ಲಿ ಸ್ನೇಹಿತನ ಪ್ರೇಯಸಿಯನ್ನು ಕಾಲ್‌ಗರ್ಲ್ ಎಂದು ತಪ್ಪಾಗಿ ಭಾವಿಸಿ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ, ಪ್ರತೀಕಾರಕ್ಕಾಗಿ ಇಬ್ಬರನ್ನು ಅಪಹರಿಸಿ …

Leave a Reply

Your email address will not be published. Required fields are marked *