ಹೈದರಾಬಾದ್ ನ ಸತ್ಯ ಸಾಯಿ ಜಿಲ್ಲೆಯ ಪೆನುಕೊಂಡದ ಸೋಮಂಡೆಪಲ್ಲಿ ಮಂಡಲದ ಕುಟುಂಬವೊಂದರಲ್ಲಿ 22 ವರ್ಷದ ವಧು ಹರ್ಷಿತಾ ತನ್ನ ಮದುವೆಯ ರಾತ್ರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಅದ್ಧೂರಿ ವಿವಾಹ ಸಮಾರಂಭ ನಡೆದ ಕೆಲವೇ ಗಂಟೆಗಳಲ್ಲಿ ಈ ಘಟನೆ ನಡೆದಿದೆ.ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಸಾವಿನ ಸುತ್ತಲಿನ ಸಂದರ್ಭಗಳ ತನಿಖೆ ನಡೆಸುತ್ತಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ದುರಂತಕ್ಕೆ ಕಾರಣವೇನಾಗಿರಬಹುದು ಎಂಬುದನ್ನು ತಿಳಿಯಲು ಪೊಲೀಸರು ಎರಡೂ ಕುಟುಂಬಗಳನ್ನು ಪ್ರಶ್ನಿಸುತ್ತಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

