ಜಾಲತಾಣದಲ್ಲಿ ಬಾಲಕಿಯನ್ನು ಪರಿಚಯ ಮಾಡಿಕೊಂಡು ದೈಹಿಕ ಸಂಪರ್ಕ ಬೆಳೆಸಿ ಗರ್ಭಿಣಿಯನ್ನಾಗಿಸಿದ್ದ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಪ್ರೀತಿಸುತ್ತೇನೆಂದು ನಂಬಿಸಿ ಒತ್ತಾಯಪೂರ್ವಕವಾಗಿ ದೈಹಿಕ ಸಂಪರ್ಕ ಬೆಳೆಸಿದ್ದ. ಈ ವೇಳೆ, ಸಂತ್ರಸ್ತ ಬಾಲಕಿ ಈಗ ಗರ್ಭಿಣಿಯಾಗಿದ್ದು, ಈ ಬಗ್ಗೆ ಮಾಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಇನ್ಸ್‌ಸ್ಟಾಗಾಂ ಐ.ಡಿ ಮುಖಾಂತರ ಆರೋಪಿಯ ಬೆನ್ನತ್ತಿದ ಪೊಲೀಸರು ತುಮಕೂರು ಮೂಲದ ನರಸಿಂಹಮೂರ್ತಿಯನ್ನು ಪತ್ತೆ ಹಚ್ಚಿ, ದಸ್ತಗಿರಿ ಕ್ರಮ ಜರುಗಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

