ಬಿಹಾರ ಮೂಲದ ಸುನೀಲ್ ಹಾಗೂ ಶೃತಿ ದಂಪತಿ. ಸುನೀಲ್ ಅವರು ನಗರದಲ್ಲಿ ಪಾನಿಪುರಿ ಮಾರಾಟ ಮಾಡಿ ಜೀವನ ಮಾಡುತ್ತಿದ್ದರು. ಇತ್ತ ತನ್ನ ಮಗಾ ಅನ್ಸ್ ನನ್ನು ಶ್ರೀ ಸತ್ಯಸಾಯಿ ಬಾಬಾ ಶಿಕ್ಷಣ ಸಂಸ್ಥೆಯ ಪೂರ್ವ ಪ್ರಾಥಮಿಕ ಶಾಲೆ ಹಾಗೂ ಪ್ರೌಢ ಶಾಲೆಗೆ ಸೇರಿಸಿದ್ದರು. ಕಳೆದ 5 ದಿನಗಳ ಹಿಂದೆ ಅನ್ಸ್ ಹಾಕಿಕೊಂಡಿದ್ದ ಅದೊಂದು ವಾಚ್ ಕಾರಣಕ್ಕೆ ಶಾಲೆಯಲ್ಲಿ ಗಲಾಟೆ ಆಗಿತ್ತಂತೆ. 9ನೇ ತರಗತಿಯ ಮೂವರು ವಿದ್ಯಾರ್ಥಿಗಳು ಅನ್ಸ್ ಮೇಲೆ ಹಲ್ಲೆ ಮಾಡಿ ವಾಚ್ ಕಿತ್ತುಕೊಂಡಿದ್ದರಂತೆ. ಆ 9ನೇ ತರಗತಿಯ ಮೂವರು ವಿದ್ಯಾರ್ಥಿಗಳು ಅನ್ಸ್ಗೆ ಹೊಡೆದ ಕಾರಣ ಆತ ಅಸ್ವಸ್ಥನಾಗಿದ್ದ.ಶಾಲೆ ಮುಂದೆ ಬಾಲಕನ ಶವವಿಟ್ಟು ಪ್ರತಿಭಟನೆ ನಡೆಸುತ್ತಿರುವುದಕ್ಕೆ ಕಾರಣ ಶಾಲಾ ಆಡಳಿತ ಮಂಡಳಿಯ ನಿರ್ಲಕ್ಷ್ಯಮಗನ ಸಾವಿಗೆ ಕಾರಣವೆಂದು ಪೋಷಕರು, ಸ್ಥಳೀಯರ ಆರೋಪಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

