ಜಿಲ್ಲಾ ಪಂಚಾಯಿತಿ ಮುಖ್ಯ ಲೆಕ್ಕಾಧಿಕಾರಿ ಅವರ ಕಾರು ಚಾಲಕ ಬಾಬು (33) ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಸುಧಾಕರ್ ಸಚಿವರಾಗಿದ್ದ ವೇಳೆ ಅವರ ಬೆಂಬಲಿಗರಾದ ನಾಗೇಶ್ ಮತ್ತು ಮಂಜುನಾಥ್ ಕಾಯಂ ಸರ್ಕಾರಿ ಕೆಲಸ ಕೊಡಿಸುತ್ತೇವೆ ಎಂದಿದ್ದರು. ₹40 ಲಕ್ಷ ನೀಡಬೇಕು ಎಂದಿದ್ದರು. ನಾನು ನನ್ನ ಬಳಿ ಇದ್ದ ಹಣದ ಜೊತೆಗೆ ಸಾಲ ಮಾಡಿ ₹25 ಲಕ್ಷ ನೀಡಿದ್ದೆ. ಆದರೆ ಕೆಲಸ ಮಾತ್ರ ಕೊಡಿಸಲಿಲ್ಲ’ ಎಂದು ಡೆತ್ ನೋಟ್‌ನಲ್ಲಿ ಬರೆದಿದ್ದಾರೆ.ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

