ಸಾಮಾಜಿಕ ಜಾಲತಾಣದಲ್ಲಿ ಅಪರಾಧಕ್ಕೆ ಪ್ರೇರಣೆಯಾಗುವಂತೆ ಹೇಳಿಕೆ ನೀಡಿದ, ಅಶ್ಲೀಲವಾಗಿ ಮಾತನಾಡಿದ ಹಾಗೂ ದ್ವೇಷ ಹುಟ್ಟಿಸುವಂತೆ ಹೇಳಿಕೆ ನೀಡಿದ ಆರೋಪದ ಮೇಲೆ ಮೂವರ ವಿರುದ್ಧ ಬೆಳ್ತಂಗಡಿ ಠಾಣೆಯ ಪೊಲೀಸರು ಪ್ರಕರಣದ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.ಅಪರಾಧ ಕೃತ್ಯಗಳನ್ನು ನಡೆಸಲು ಪ್ರೇರಣೆಯಾಗುವಂತಹ, ಅಶ್ಲೀಲ ಹಾಗೂ ಸಾರ್ವಜನಿಕರಿಗೆ ಕಿರಿ ಕಿರಿಯುಂಟಾಗುವಂತೆ ಆರೋಪಿ ಗಿರೀಶ್ ಮಟ್ಟಣ್ಣನವರ್ ಮಾತನಾಡಿರುವ ವಿಡಿಯೊವನ್ನು ತಮ್ಮ ಫೇಸ್‌ಬುಕ್‌ನಲ್ಲಿ ಬುಧವಾರ (ಆ.6ರಂದು) ಪ್ರಸಾರಮಾಡಿದ್ದಾರೆ ಎಂದು ಆರೋಪಿಸಿ ಬೆಳ್ತಂಗಡಿ ನಿವಾಸಿ ಚರಣ್ ಶೆಟ್ಟಿ (32) ದೂರು ನೀಡಿದ್ದಾರೆ. ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್) ಸೆಕ್ಷನ್ 57 (ಅಪರಾಧ ನಡೆಸಲು ಪ್ರೇರಣೆ), ಸೆಕ್ಷನ್ 296 (ಅಶ್ಲೀಲ ವಿಚಾರ ಪ್ರಸಾರ) ಹಾಗೂ ಸೆಕ್ಷನ್ 190ರ (ಅಕ್ರಮ ಕೂಟ ರಚನೆ) ಅಡಿ ಪ್ರಕರಣ ದಾಖಲಾಗಿದೆ.’
bigtvnews | Hubli Dharwad News | Kannada News | Karnataka News Hubli News | News In Hubli | Local news

