ಚಾಮುಂಡಿ ಬೆಟ್ಟದ ತಿರುವಿನಲ್ಲಿ ಕೆಎಸ್ಆರ್ಟಿಸಿ ಸಾರಿಗೆ ಬಸ್ ರಸ್ತೆ ತಡೆಗೋಡೆಗೆ ಡಿಕ್ಕಿ ಹೊಡೆದು ಮಗುಚಿ ಬಿದ್ದಿದ್ದು, ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.ನಗರ ಬಸ್ ನಿಲ್ದಾಣದಿಂದ ಚಾಮುಂಡಿ ಬೆಟ್ಟಕ್ಕೆ ತೆರಳುತ್ತಿದ್ದ ಬಸ್ ಬೆಟ್ಟದ ಮಧ್ಯ ಭಾಗದ ರಸ್ತೆಯಲ್ಲಿನ ಗೆಸ್ಟ್ ಹೌಸ್ ಬಳಿ ಗುರುವಾರ ಸಂಜೆ ಮಗುಚಿ ಬಿದ್ದಿದೆ.ಸ್ಥಳಕ್ಕೆ ಬಂದ ಪೊಲೀಸರು, ಬಸ್ ತೆರವುಗೊಳಿಸಿ ಗಾಯಗೊಂಡಿದ್ದ ಪ್ರಯಾಣಿಕನನ್ನು ಕೆ.ಆರ್ ಆಸ್ಪತ್ರೆಗೆ ದಾಖಲಿಸಿದರು. ಅಪಘಾತದಿಂದ ಕೆಲ ಕಾಲ ಬೆಟ್ಟದ ರಸ್ತೆಯಲ್ಲಿ ಸಂಚಾರ ವ್ಯತ್ಯಯಗೊಂಡಿತು. ಕೆ.ಆರ್ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
bigtvnews | Hubli Dharwad News | Kannada News | Karnataka News Hubli News | News In Hubli | Local news

