Breaking News

ಬೀಳಗಿ | ಸಮುದಾಯ ಭವನ ನಿರ್ಮಾಣಕ್ಕೆ ₹20 ಲಕ್ಷ: ಶಾಸಕ ಜೆ.ಟಿ. ಪಾಟೀಲ

ಹಡಪದ ಅಪ್ಪಣ್ಣ ಸಮಾಜ ಬಾಂಧವರು ಸಮಾಜದ ಕಾರ್ಯಚಟುವಟಿಕೆಗಳಿಗಾಗಿ ಸಮುದಾಯ ಭವನ ನಿರ್ಮಿಸುವ ಉದ್ದೇಶ ಹೊಂದಿದ್ದು, ಇದಕ್ಕೆ₹20 ಲಕ್ಷ ಅನುದಾನ ನೀಡಲಾಗುವುದು ಎಂದು ಶಾಸಕ ಜೆ.ಟಿ. ಪಾಟೀಲ ಹೇಳಿದರು.ನಿರಂತರ ದುಡಿಮೆ ಕಾಯಕ ಮಾಡುವ ಹಡಪದ ಅಪ್ಪಣ್ಣ ಸಮಾಜ, ನಿತ್ಯ ಕ್ಷೌರಿಕ ವೃತ್ತಿ ಮಾಡಿ ಜೀವನ ಸಾಗಿಸುವರು. ಈ ಸಮಾಜದ ಬಹುತೇಕ ಕುಟುಂಬಗಳಲ್ಲಿ ಜಮೀನು ಇಲ್ಲದೆ ಜೀವನ ಸಾಗಿಸುತ್ತಿರುವರು.ಇಂತಹ ಸಮಾಜದ ಅಭಿವೃದ್ಧಿಗೆ ಸರ್ಕಾರದಿಂದ ಎಲ್ಲ ರೀತಿಯ ಸೌಲಭ್ಯ ನೀಡಲಾಗುವುದು ಜೊತೆಗೆ ಹಡಪದ ಅಪ್ಪಣ್ಣ ಅಭಿವೃದ್ಧಿ ನಿಗಮದ ಕುರಿತಾಗಿ ಚರ್ಚಿಸಿ ನಿಗಮಕ್ಕೆ ಹಣಕಾಸು ಮಂಜೂರು ಆಗುವಂತೆ ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗುವುದು ಎಂದು ಹೇಳಿದರು.

Share News

About BigTv News

Check Also

ಮದುವೆಯಾಗಿ ಮಕ್ಕಳಿದ್ರೂ ಅಕ್ರಮ ಸಂಬಂಧ: ರೈಲಿಗೆ ತಲೆಕೊಟ್ಟು ವಿವಾಹಿತೆಯೊಂದಿಗೆ ಯುವಕ ಆತ್ಮಹತ್ಯೆ

ಮಂಡ್ಯದ ವಿಸಿ ಫಾರಂ ರಸ್ತೆಯ ರೈಲ್ವೆ ಹಳಿಯಲ್ಲಿ ರೈಲಿಗೆ ತಲೆಕೊಟ್ಟು ವಿವಾಹಿತೆ ಸಹನಾ (25) ಮತ್ತು ರಾಹುಲ್ (23) ಆತ್ಮಹತ್ಯೆಗೆ …

Leave a Reply

Your email address will not be published. Required fields are marked *