Breaking News

ಅಜಿತ್‌ ಹನುಮಕ್ಕನವರ್‌ ವಿರುದ್ಧ ಸೇರಿ 2 ಠಾಣೆಯಲ್ಲಿ 7 ಪ್ರಕರಣ ದಾಖಲು!

ಧರ್ಮಸ್ಥಳದಲ್ಲಿ ಶವಗಳನ್ನು ಹೂತು ಹಾಕಿದ ಪ್ರಕರಣದ ಕುರಿತು ಎಸ್‌ ಐಟಿ ತನಿಖೆ ನಡೆಯುತ್ತಿರುವಾಗಲೇ ನಡೆದ ಹಲ್ಲೆ ಹಾಗೂ ಸುಳ್ಳು ಸುದ್ದಿಗೆ ಸಂಬಂಧಿಸಿ ಅಜಿತ್‌ ಹನುಮಕ್ಕನವರ್‌ ವಿರುದ್ಧ ಸೇರಿ ಧರ್ಮಸ್ಥಳ ಹಾಗೂ ಬೆಳ್ತಂಗಡಿ ಪೊಲೀಸ್‌ ಠಾಣೆಗಳಲ್ಲಿ ಒಟ್ಟಾರೆ 7 ಪ್ರಕರಣಗಳು ದಾಖಲಾಗಿವೆ.ಧರ್ಮಸ್ಥಳ ಪಾಂಗಳ ಕ್ರಾಸ್‌ನಲ್ಲಿ ನಡೆದ ಹಲ್ಲೆಯ ಗಾಯಾಳುಗಳನ್ನು ಚಿಕಿತ್ಸೆಗಾಗಿ ದಾಖಲಿಸಿದ್ದ ಉಜಿರೆಯ ಬೆನಕ ಆಸ್ಪತ್ರೆಯ ಬಳಿ ಸಾರ್ವಜನಿಕರು ಜಮಾವಣೆಗೊಂಡಿರುವ ಬಗ್ಗೆ ಮಾಹಿತಿ ಬಂದ ಮೇರೆಗೆ ಬೆಳ್ತಂಗಡಿ ಪೊಲೀಸ್ ಠಾಣಾ ಪೊಲೀಸ್ ಉಪನಿರೀಕ್ಷಕರು ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ತೆರಳಿದ್ದರು.ಈ ವೇಳೆ ಸ್ಥಳದಲ್ಲಿ ಸುಮಾರು 50 ರಿಂದ 100 ಜನರು ಕಾನೂನು ಬಾಹಿರವಾಗಿ ಅಕ್ರಮ ಕೂಟ ಸೇರಿ ಘೋಷಣೆಗಳನ್ನು ಕೂಗುತ್ತಿದ್ದರು. ಯಾವುದೇ ಅಹಿತಕರ ಘಟನೆ ನಡೆಸದಂತೆ ಹಾಗೂ ಸ್ಥಳದಿಂದ ತೆರಳುವಂತೆ ಸೂಚಿಸಿದರೂ, ಪೂರ್ವಾನುಮತಿ ಪಡೆಯದೇ ಅಕ್ರಮಕೂಟ ಸೇರಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂದು ಪೊಲೀಸರು ಆರೋಪಿಸಿದ್ದಾರೆ.

Share News

About BigTv News

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *