ನ ಟ ವಿಷ್ಣುವರ್ಧನ್ ಅವರ ಸ್ಮಾರಕದ ವಿಚಾರವಾಗಿ ಮೊದಲಿನಿಂದಲೂ ಅಭಿಮಾನಿಗಳಿಗೆ ಬೇಸರ ಇತ್ತು. ಈಗ ಇನ್ನೊಂದು ನೋವಿನ ಘಟನೆ ನಡೆದಿದೆ. ಬೆಂಗಳೂರಿನ ಅಭಿಮಾನ್ ಸ್ಟುಡಿಯೋದಲ್ಲಿ ಇದ್ದ ವಿಷ್ಣುವರ್ಧನ ಅವರ ಸ್ಮಾರಕವನ್ನು ನೆಲಸಮ ಮಾಡಲಾಗಿದೆ.ನಮ್ಮ ದೇವರ ಗುಡಿಯನ್ನು ಇಂದು ನೆಲಸಮ ಮಾಡಿದ್ದಾರೆ. ಇದು ನನ್ನ ಯಜಮಾನರು ಮಲಗಿದ್ದಂತಹ ಜಾಗ. ಅಲ್ಲೊಂದು ಪುಟ್ಟ ಗುಡಿ ಇತ್ತು. ಸಣ್ಣ ಗೋಪುರ ಇತ್ತು. ಆ ಗೋಪುರವನ್ನು ರಾತ್ರೋರಾತ್ರಿ ನೆಲಸಮ ಮಾಡಿದ್ದಾರೆ. ನಮ್ಮ ಯಜಮಾನರನ್ನು ನೋಡಲು ಬಂದರೆ ಗೇಟ್ ಕೂಡ ತೆಗೆಯುತ್ತಿಲ್ಲ. ಪೊಲೀಸರು ಸರ್ಪಗಾವಲು ಹಾಕಿಕೊಂಡು ಕೂತ್ತಿದ್ದಾರೆ’ ಎಂದು ರವಿ ಶ್ರೀವತ್ಸ ಹೇಳಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

