ಕಳೆದ ಎರಡು ವರ್ಷಗಳಿಂದ ಕಾದು ಕುಳಿತಿದ್ದ ರಾಜ್ಯ ಸರ್ಕಾರಿ ನೌಕರರಿಗೆ ಕೊನೆಗೂ ಸಿಹಿ ಸುದ್ದಿ ಸಿಕ್ಕಿದೆ. ಹಳೇ ಪಿಂಚಣಿ ಜಾರಿಗೆ ಒತ್ತಾಯಿಸಿ ನಡೆಸುತ್ತಿದ್ದ ಪ್ರತಿಭಟನೆಗಳು ಫಲ ನೀಡಿದಂತೆ ಕಾಣುತ್ತಿದೆ. ಕಳೆದ ಚುನಾವಣೆಯಲ್ಲಿ ಸರ್ಕಾರಿ ನೌಕರರ ಬೇಡಿಕೆಯನ್ನ ಈಡೇರಿಸುವುದಾಗಿ ರಾಜ್ಯ ಕಾಂಗ್ರೆಸ್ ಭರವಸೆಯನ್ನ ನೀಡಿತ್ತು.NPS ರದ್ದುಗೊಳಿಸಿ ರಾಜ್ಯ ಸರ್ಕಾರಿ ನೌಕರರ ಬೇಡಿಕೆಗಳಲ್ಲಿ ಒಂದಾಗಿರುವ ಹಳೆ ಪಿಂಚಣಿ ಯೋಜನೆ ಜಾರಿಗೊಳಿಸುವುದು ಎಂದು ರಾಜ್ಯ ಸರ್ಕಾರ ಮಾತು ಕೊಟ್ಟಿದೆ. ಈ ವಿಚಾರದಲ್ಲಿ ಈಗಾಗಲೇ ಜಾರಿಗೊಳಿಸುವುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಘೋಷಿಸಿದ್ದರು. ಅದರ ಸಲುವಾಗಿ ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ಎನ್ನುವಂತೆ ಆಗಸ್ಟ್.12ರಂದು ಈ ಸಂಬಂಧ ಚರ್ಚಿಸಲು ಮಹತ್ವದ ಸಭೆ ಕರೆಯಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

