Breaking News

ನನ್ನ ಸಾವಿಗೆ ಈ ಮೂವರೇ ಕಾರಣ – ಪತ್ರ ಬರೆದಿಟ್ಟು ನೇಣಿಗೆ ಶರಣಾದ ವಿದ್ಯಾರ್ಥಿನಿ!

ಬಿಎ ವಿದ್ಯಾರ್ಥಿನಿಯೊಬ್ಬಳು ತನ್ನ ಸಹಪಾಠಿಗಳ ಕಿರುಕುಳದಿಂದ ಬೇಸತ್ತು ನೇಣಿಗೆ ಶರಣಾಗಿರುವ ಘಟನೆ ಶುಕ್ರವಾರ ಬಾಗಲಕೋಟೆಯಲ್ಲಿ ನಡೆದಿದೆ. ಅಂಜಲಿ ಮುಂಡಾಸ (21) ಮೃತ ದುರ್ದೈವಿ. ಈಕೆ ಸಾಯುವ ಮುನ್ನ ತನಗೆ ಕಿರುಕುಳ ನೀಡಿದಿವರ ಹೆಸರು ಬರೆದಿಟ್ಟು ಇವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿದ್ದಾಳೆ.ಡೆತ್‌ ನೋಟ್‌ ನಲ್ಲಿ ನನ್ನ ಸಾವಿಗೆ ಕಾರಣರಾದವರು ಈ ಮೂವರು ವ್ಯಕ್ತಿಗಳು. ನನ್ನ ಬದುಕಿನಲ್ಲಿ ಪರಿಣಾಮವನ್ನು ಬೀರಿದ್ದಾರೆ. ಅವರುಗಳೆಂದರೆ ವರ್ಷಾ, ಪ್ರದೀಪ ಮತ್ತು ಇನ್ನಿತರ ಸ್ನೇಹಿತರು. ನನ್ನ ಬಗ್ಗೆ ನನ್ನನ್ನು ಮಾನಸಿಕವಾಗಿ ಕುಗ್ಗಿಸಿದ್ದಾರೆ. ಮತ್ತು ಅವರು ನನ್ನ ಬದುಕಿಗೆ ಮಾರಕ ವ್ಯಕ್ತಿಗಳಾಗಿರುತ್ತಾರೆ. ಇವರನ್ನು ಸುಮ್ಮನೆ ಬಿಡಬಾರದು. Saying Good bye ಎಂದು ಬರೆಯಲಾಗಿದೆ.ಅಂಜಲಿ ಡೆತ್‌ ನೋಟ್‌ ಅನ್ನು ಆಧರಿಸಿ ಗುಳೇದಗುಡ್ಡ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಆರೋಪಿಗಳನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ಮುಂದುವರೆಸಿದ್ದಾರೆ.

Share News

About BigTv News

Check Also

ರೀಲ್ಸ್ ಲೋಕದ ಚೆಲುವೆ ಶವವಾಗಿ ಪತ್ತೆ : ಅತ್ತ ಗಂಡ ವಶಕ್ಕೆ, ಇತ್ತ ಕಂದನ ಆಕ್ರಂದನ.. ಏನಾಯ್ತು..?

ತುಮಕೂರು: ತಾಲೂಕಿನ ಯಲ್ಲಾಪುರ ಗ್ರಾಮದಲ್ಲಿ 24 ವರ್ಷದ ಸುಷ್ಮಿತಾ ಎಂಬ ಯುವತಿ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದು, ಎರಡೂವರೆ …

Leave a Reply

Your email address will not be published. Required fields are marked *