Breaking News

ಕ್ಷುಲ್ಲಕ ಕಾರಣಕ್ಕೆ ರಸ್ತೆಯಲ್ಲಿ ನಿಂತಿದ್ದ ವ್ಯಕ್ತಿಯೊಬ್ಬನ ಕೈಗೆ ಇಬ್ಬರು ದುಷ್ಕರ್ಮಿಗಳು ಮಚ್ಚಿನಿಂದ ಹಲ್ಲೆ

ಜೆಸಿ‌ ರಸ್ತೆಯಲ್ಲಿ ಹರೀಶ್ ಕುಮಾರ್(38) ಎಂಬಾತನ ಮೇಲೆ ಹಲ್ಲೆ ಪ್ರಕರಣದಲ್ಲಿ ಇಬ್ಬರು ಅಪ್ರಾಪ್ತರನ್ನು ಬಂಧಿಸಿದ ಕಲಾಸಿಪಾಳ್ಯ ಪೊಲೀಸರು ಒಂದು ವಾರದಲ್ಲೇ ಪ್ರಕರಣವನ್ನು ಮುಕ್ತಾಯಗೊಳಿಸಿದ್ದಾರೆ. ಜೆ.ಸಿ ರಸ್ತೆಯಲ್ಲಿ ಆಗಸ್ಟ್ 2 ರಂದು ರಾತ್ರಿ 10.30 ಕ್ಕೆ ನಡೆದ ಹಲ್ಲೆ ಪ್ರಕರಣ ನಗರವನ್ನೇ ಬೆಚ್ಚಿ ಬೀಳಿಸಿತ್ತು. ಆಟೋಮೊಬೈಲ್ ಅಂಗಡಿಯಲ್ಲಿ ಕೆಲಸ ಮಾಡ್ತಿದ್ದ ಹರೀಶ್ ರಾತ್ರಿ‌ ಹೊತ್ತು ಸ್ನೇಹಿತರ ಜೊತೆಗೆ ನಿಂತು ಮಾತನಾಡುತ್ತಿದ್ದ. ಈ ವೇಳೆ ಬೈಕ್ ನಲ್ಲಿ ಬಂದ ಇಬ್ಬರು ಅಪ್ರಾಪ್ತರು ನೇರವಾಗಿ ಸಾಗುತ್ತಿದ್ದಿದ್ದನ್ನು ಕಂಡ ಹರೀಶ್‌ ಅವರಿಗೆ ಆ ಕಡೆ ಡೆಡ್ ಎಂಡ್ ಇದೆ ಎಂದು ಹೇಳಿದ್ದ. ಇಷ್ಟಕ್ಕೇ ಕೋಪಗೊಂಡ ಆರೋಪಿಗಳು ಮಚ್ಚಿನಿಂದ ಭೀಕರವಾಗಿ ಹಲ್ಲೆ ನಡೆಸಿದ್ದರು. ಈ ಘಟನೆಯಲ್ಲಿ ಹರೀಶ್ ಕುಮಾರ್ ಕೈ ಗೆ ಗಂಭೀರವಾಗಿ ಗಾಯವಾಗಿತ್ತು. ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಹರೀಶ್ ಹಲವು ದಿನಗಳ ಕಾಲ ಐಸಿಯುನಲ್ಲಿದ್ದ.

Share News

About BigTv News

Check Also

6ನೇ ತರಗತಿ ಮೇಲೆ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿ ಬಂಧನ

ಮುಂಡಗೋಡ: ಆರನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಗರ್ಭಿಣಿಯನ್ನಾಗಿಸಿದ ಆರೋಪದ ಮೇಲೆ 65 ವರ್ಷದ ಇಸ್ಮಾಯಿಲ್ ಹುಲಗೂರ …

Leave a Reply

Your email address will not be published. Required fields are marked *