ಪ್ರಧಾನಿ ಮೋದಿ ಅವರು ರಸ್ತೆಯ ಮೂಲಕ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣಕ್ಕೆ ಹೊರಟಿದ್ದು, ಈ ವಳೆ ರಸ್ತೆಯಲ್ಲಿ ಇಕ್ಕೆಲಗಳಲ್ಲಿ ಜನರು ಮೋದಿ ಮೋದಿ ಘೋಷಣೆ ಕೂಗುತ್ತಿದ್ದಾರೆ.ಬೆಂಗಳೂರಿನ ನಮ್ಮ ಮೆಟ್ರೋ `ಹಳದಿ ಮೆಟ್ರೋ’ ಮಾರ್ಗ ಉದ್ಘಾಟನೆ ಹಾಗೂ 3 ವಂದೇ ಭಾರತ್ ರೈಲುಗಳಿಗೆ ಹಸಿರು ನಿಶಾನೆ ತೋರಿಸಲಿದ್ದಾರೆ. ಇಂದು ಬೆಳಿಗ್ಗೆ 10:55 ಕ್ಕೆ ದೆಹಲಿಯಿಂದ ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ಆಗಮಿಸಿದ್ದಾರೆ.
ಹೆಚ್‌ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿರುವ ಮೋದಿ ಹೆಲಿಕಾಪ್ಟರ್ ಮೂಲಕ ಮೇಖ್ರಿ ಸರ್ಕಲ್ ಬಳಿ ಇರುವ ಹೆಚ್.ಕ್ಯು.ಟಿ.ಸಿ. ಕೇಂದ್ರಕ್ಕೆ ಆಗಮಿಸಲಿದ್ದಾರೆ. ನಂತರ ರಸ್ತೆ ಮಾರ್ಗವಾಗಿ 11 15ಕ್ಕೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣಕ್ಕೆ ಆಗಮಿಸಲಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

