Breaking News

ಮಾವಾ’ ಘಾಟಿನಲ್ಲಿ ಮುಳುಗಿರುವ ಜಮಖಂಡಿ!

ಒಂದು ಕಾಲಕ್ಕೆ ಜಮಖಂಡಿ ಆಧ್ಯಾತ್ಮ, ಕ್ರೀಡೆ, ಸಾಹಿತ್ಯ, ರಾಜ್ಯವೈಭವ, ಕೃಷಿ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಒಂದಿಲ್ಲೊಂದು ಸಾಧನೆಗಳನ್ನು ಮಾಡುತ್ತಾ ರಾಜ್ಯದ ಗಮನವನ್ನು ಸೆಳೆಯುತ್ತಿತ್ತು. ಆದರೆ, ಇಂದು ಜಮಖಂಡಿ ‘ಮಾವಾ’ (ಗುಟಕಾದಂತಿರುತ್ತದೆ) ಮಾರಾಟದಿಂದ ಗುರುತಿಸಿಕೊಳ್ಳತೊಡಗಿದೆ.ಜಮಖಂಡಿ ವ್ಯಾಪ್ತಿಯಲ್ಲಿ 2020ರಿಂದ 2025ರವರೆಗೆ ಅಂದಾಜು 100ಕ್ಕೂ ಅಧಿಕ ಪ್ರಕರಣಗಳು ದಾಖಲಾಗಿವೆ. ಆದರೆ, ಮಾವಾ ಉತ್ಪಾದನೆಯ ಸಂಪೂರ್ಣ ಜಾಲವನ್ನು ಭೇದಿಸಲು ಅಧಿಕಾರಿಗಳಿಗೆ ಸಾಧ್ಯವಾಗಿಲ್ಲ. ಸ್ಥಳೀಯ ಪೊಲೀಸ್ ಅಧಿಕಾರಿಗಳು ಹಲವಾರು ಪ್ರಕರಣ ದಾಖಲು ಮಾಡಿ, ಬಿಟ್ಟು ಬಿಡುತ್ತಾರೆ. ಕೆಲ ದಿನಗಳ ನಂತರ ಮತ್ತೇ ಅವರು ಅದೇ ಕೆಲಸದಲ್ಲಿ ತೊಡಗಿಸಿಕೊಳ್ಳುತ್ತಾರೆ.ಕೆಲವರು ಮಾವಾ ಸೇವಿಸಿದರೆ ಹುಮ್ಮಸ್ಸು ಹೆಚ್ಚುತ್ತದೆ ಎಂಬ ಭ್ರಮೆಯಲ್ಲಿದ್ದರೆ, ಇನ್ನೂ ಕೆಲವರು ಹಸಿವು ತಡೆಯಲು ಜಗಿಯುತ್ತಾರೆ. ಸರ್ಕಾರಿ ಕಚೇರಿ, ಬಸ್ ನಿಲ್ದಾಣ, ರಸ್ತೆಗಳು, ದೇವಸ್ಥಾನ, ಸೇರಿದಂತೆ ಸಾರ್ವಜನಿಕರು ಕುಳಿತುಕೊಳ್ಳುವ ಸ್ಥಳಗಳಲ್ಲಿ ಉಗುಳುವುದರಿಂದ ಪರಿಸರ ಹಾಳಾಗುತ್ತಿದೆ.ಜಮಖಂಡಿ ಮಾವಾ ಪಾಕೇಟ್ ಗಳುಸಂಗಪ್ಪ ಜಿಲ್ಲಾಧಿಕಾರಿಮಾವಾ ಉತ್ಪಾದನೆಯನ್ನು ಸಂಪೂರ್ಣ ಬಂದ್ ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ ಹಲವಾರು ಕಡೆಗಳಲ್ಲಿ ದಾಳಿ ಮಾಡಲಾಗಿದೆ ಪ್ರಕರಣವನ್ನೂ ದಾಖಲಿಸಲಾಗಿದೆ.

Share News

About BigTv News

Check Also

ಸಹಾಯ ಮಾಡುವ ನಾಟಕವಾಡಿ ಯುವತಿಗೆ ಲೈಂಗಿಕ ದೌರ್ಜನ್ಯವೆಸೆದ ಕಾಮುಕರು!

ಯಾದಗಿರಿ ರೈಲು ನಿಲ್ದಾಣದಲ್ಲಿ 22 ವರ್ಷದ ಯುವತಿಗೆ ಸಹಾಯ ಮಾಡುವ ನೆಪದಲ್ಲಿ ಪರಿಚಯ ಮಾಡಿಕೊಂಡ ವ್ಯಕ್ತಿಯೊಬ್ಬ ಮದುವೆಯಾಗುವುದಾಗಿ ನಂಬಿಸಿ ದೌರ್ಜನ್ಯ …

Leave a Reply

Your email address will not be published. Required fields are marked *