ಒಬ್ಬ ಯುವಕನನ್ನು ದಂಪತಿಗಳು ಕ್ರೂರವಾಗಿ ಕೊಂದ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಸಂಭಾಲ್‌ನಲ್ಲಿ ನಡೆದಿದೆ. ಮನೆಗೆ ಕರೆಸಿ ಸ್ಕ್ರೂಡ್ರೈವರ್, ಪ್ಲೈಯರ್‌ಗಳಿಂದ ಚುಚ್ಚಿ ಹಿಂಸಿಸಿ ಕೊಲೆ ಮಾಡಲಾಗಿದೆ. ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಯುವಕ ಮೃತಪಟ್ಟಿದ್ದ.ರಾತ್ರಿ ತಡವಾಗಿ ಅನೀಸ್ ಸಾವನ್ನಪ್ಪಿದ ಬಗ್ಗೆ ಮಾಹಿತಿ ಬಂದಿದೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರಾಜೇಶ್ ಕುಮಾರ್ ಶ್ರೀವಾಸ್ತವ ತಿಳಿಸಿದ್ದಾರೆ. ಕೊಲೆ ಪ್ರಕರಣ ದಾಖಲಿಸಲಾಗಿದ್ದು, ತನಿಖೆ ಮುಂದುವರಿಯುತ್ತಿದೆ ಎಂದವರು ಹೇಳಿದ್ದಾರೆ.
ವಿಚಾರಣೆ ವೇಳೆ ಅನೀಸ್ ಮತ್ತು ಸಿತಾರಾ ನಡುವೆ ಅಕ್ರಮ ಸಂಬಂಧ ಇದ್ದದ್ದು ಬೆಳಕಿಗೆ ಬಂದಿದೆ. ರಯೀಸ್ ಮತ್ತು ಸಿತಾರಾ ಅನೀಸ್‌ನನ್ನು ಕೊಲ್ಲಲು ಪ್ಲ್ಯಾನ್ ಮಾಡಿದ್ದರು. ಮನೆಗೆ ಕರೆಸಿ ಕೊಲೆ ಮಾಡಿದರು ಎಂದು ಪೊಲೀಸರು ತಿಳಿಸಿದ್ದಾರೆ. ಕೊಲೆಯಲ್ಲಿ ಸಿತಾರಾ ಭಾಗಿಯಾಗಲು ಕಾರಣ ಏನೆಂಬುದು ಇನ್ನೂ ಸ್ಪಷ್ಟವಾಗಿಲ್ಲ.
bigtvnews | Hubli Dharwad News | Kannada News | Karnataka News Hubli News | News In Hubli | Local news

