Breaking News

ಚಿಂತಾಮಣಿ | ಮನೆಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ!

ನಗರ ವ್ಯಾಪ್ತಿಯ ವೆಂಕಟಗಿರಿಕೋಟೆಯಲ್ಲಿ ಕ್ಷುಲ್ಲಕ ಕಾರಣದಿಂದ ಗುಂಪು ಶುಕ್ರವಾರ ಮನೆಗೆ ನುಗ್ಗಿ ಒಂಟಿ ಮಹಿಳೆಯ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿದೆ. ಹಲ್ಲೆಗೆ ಒಳಗಾದ ಮಹಿಳೆ ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ವೆಂಕಟಗಿರಿಕೋಟೆಯ ನಿವಾಸಿ ಫರಹನಾಜ್ ಬಾನು (35) ಹಲ್ಲೆಗೆ ಒಳಗಾಗಿರುವ ಮಹಿಳೆ.ಹಲ್ಲೆ ನಡೆಸಿರುವ ಮಹಿಳೆಯರು ಚಿಂತಾಮಣಿ ನಗರದ ಶಾಂತಿನಗರದ ನಿವಾಸಿಗಳಾದ ನಸ್ರೀನ್ ತಾಜ್, ಬತುಲ್, ನಾಝಿಮ್ ಎಂಬುವರು ಎನ್ನಲಾಗಿದೆ.ವಿಷಯ ತಿಳಿದ ತಕ್ಷಣ ನಗರ ಪೊಲೀಸ್ ಠಾಣೆ ಪೊಲೀಸರು ಆಸ್ಪತ್ರೆಗೆ ಭೇಟಿ ನೀಡಿ ಹಲ್ಲೆಗೆ ಒಳಗಾಗಿರುವ ಮಹಿಳೆಯಿಂದ ಹೇಳಿಕೆ ಪಡೆದುಕೊಂಡಿದ್ದಾರೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *