Breaking News

ಫಾಸ್ಟ್‌ಗಮ್ ಚಟಕ್ಕೆ ದಾಸನಾದ ಯುವಕನಿಂದ ಅಜ್ಜಿಯ ಕೊಲೆ: ಅಪ್ಪ ಅಮ್ಮನ ಸ್ಥಿತಿ ಗಂಭೀರ

ಫಾಸ್ಟ್ ಗಮ್ ವಾಸನೆ ಎಳೆದುಕೊಳ್ಳುವ ಚಟಕ್ಕೆ ಬಿದ್ದ ಯುವಕನೋರ್ವ ತನ್ನ ಅಜ್ಜಿಯನ್ನೇ ಯಮಪುರಿಗೆ ಕಳುಹಿಸಿದ್ದಾನೆ. ಜೊತೆಗೆ ಈತ ತನ್ನ ಪೋಷಕರ ಮೇಲೆಯೂ ಹಲ್ಲೆ ಮಾಡಿದ್ದು, ಅವರ ಸ್ಥಿತಿಯೂ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.ಘಟನೆ ನಡೆದಿರುವುದು ಮಹಾರಾಷ್ಟ್ರದ ಬೀಡ್ ಜಿಲ್ಲೆಯ ಪಾರ್ಲಿ ಎಂಬಲ್ಲಿ ಈ ಫಾಸ್ಟ್ ಗಮ್ ರಾಸಾಯನಿಕದ ಪ್ರಭಾವದಲ್ಲಿ ಇದ್ದ ಯುವಕ ಚಾಕುವಿನಿಂದ ತನ್ನ ಅಜ್ಜಿ ಹಾಗೂ ಪೋಷಕರ ಮೇಲೆ ಹಲ್ಲೆ ಮಾಡಿದ್ದಾನೆ. ಘಟನೆಯಲ್ಲಿ ಅಜ್ಜಿ ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಈತನ ಅಪ್ಪ ಅಮ್ಮನ ಸ್ಥಿತಿ ಗಂಭೀರವಾಗಿದೆ. ತನ್ನ ಈ ಅಂಟು ವ್ಯಸನಕ್ಕೆ ಹಣ ನೀಡುವುದಕ್ಕೆ ನಿರಾಕರಿಸಿದ ಹಿನ್ನೆಲೆಯಲ್ಲಿ ಈತ ಕ್ರೋಧಗೊಂಡು ಪೋಷಕರ ಮೇಲೆ ಹಲ್ಲೆ ಮಾಡಿದ್ದಾನೆ.

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *