ಪಾಕಿಸ್ತಾನದ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ನ ಪರಮಾಣು ಬೆದರಿಕೆಗೆ ಭಾರತ ಇಂದು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದೆ. ಪರಮಾಣು ಶಸ್ತ್ರಾಸ್ತ್ರಗಳ ಮುಂದಿಟ್ಟು ಬೆದರಿಸುವುದು ಪಾಕಿಸ್ತಾನದ ಹಳೆಯ ಅಭ್ಯಾಸ. ಆದರೆ ಭಾರತ ಪರಮಾಣು ಬ್ಲ್ಯಾಕ್‌ಮೇಲ್‌ಗೆ ಮಣಿಯುವುದಿಲ್ಲ.ಭಾರತ ಅಣೆಕಟ್ಟು ನಿರ್ಮಿಸುವವರೆಗೆ ಕಾಯಿರಿ, ನಂತರ 10 ಕ್ಷಿಪಣಿಗಳಿಂದ ಅದನ್ನು ನಾಶಪಡಿಸುತ್ತೇವೆ. ಸಿಂಧೂ ನದಿ ಭಾರತೀಯರ ಕುಟುಂಬದ ಆಸ್ತಿಯಲ್ಲ. ಅಲ್ಹಮ್ದುಲಿಲ್ಲಾಹ್ ಎಂದು ಉಲ್ಲೇಖಿಸಿದ್ದು ನಮ್ಮಲ್ಲಿ ಕ್ಷಿಪಣಿಗಳ ಕೊರತೆಯಿಲ್ಲ ಎಂದು ಬೆದರಿಕೆ ಹಾಕಿದ್ದರು.ಭಾರತ-ಪಾಕ್ ಸೇರಿದಂತೆ ಸಂಘರ್ಷಕ್ಕೆ ಒಳಗಾಗಿರುವ ಜಗತ್ತಿನ ಹಲವು ದೇಶಗಳ ನಡುವೆ ಶಾಂತಿ ಸ್ಥಾಪನೆ ಮಾಡುತ್ತೇನೆ ಎಂದು ಡೊನಾಲ್ಡ್ ಟ್ರಂಪ್ ಹೇಳುತ್ತಿರುವ ಬೆನ್ನಲ್ಲೇ ಮುನೀರ್ ಅಮೆರಿಕದ ನೆಲದಲ್ಲಿ ನಿಂತು ಭಾರತಕ್ಕೆ ಬೆದರಿಕೆ ಹಾಕಿರುವುದು ಗಮನಾರ್ಹ ಸಂಗತಿಯಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

