ಪತ್ನಿಯೊಂದಿಗೆ ಬಾಲ್ಯಸ್ನೇಹಿತ ಜಯ ಅನೈತಿಕ ಸಂಬಂಧ ವಿಜಯ್‌ಗೆ ಗೊತ್ತಾಗಿದೆ. ಅಲ್ಲದೇ ಇಬ್ಬರೂ ಒಟ್ಟಿಗಿರುವ ಫೋಟೋಗಳು ಸಿಕ್ಕಿಬಿದ್ದಿದ್ದರಿಂದ ಈ ವಿಷಯದ ಬಗ್ಗೆ ವಿಜಯ್ ಗಲಾಟೆಯನ್ನೂ ಮಾಡಿದ್ದ. ಈ ಕಾರಣಕ್ಕಾಗಿ ಕಾಮಾಕ್ಷಿಪಾಳ್ಯ ಬಿಟ್ಟು ಕಡಬಗೆರೆಯ ಮಾಚೋಹಳ್ಳಿಯಲ್ಲಿ ಬಾಡಿಗೆ ಮನೆಗೆ ತೆರಳಿದ್ದ ವಿಜಯ್. ಆದರೂ ಆಶಾ ಮತ್ತು ಧನಂಜಯನ ಸಂಬಂಧಕ್ಕೆ ಕಡಿವಾಣ ಬಿದ್ದಿರಲಿಲ್ಲ.
ಸಂಜೆ ವೇಳೆ ಮನೆಯಿಂದ ಹೋಗಿದ್ದ ವಿಜಯ್, ಡಿಗ್ರೂಪ್ ಲೇಔಟ್‌ನಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಈ ಘಟನೆಯ ಸಂಬಂಧ ಮಾದನಾಯಕನಹಳ್ಳಿ ಪೊಲೀಸರು ಆಶಾಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ವಿಜಯ್‌ನ ಕೊಲೆಗೆ ಆಶಾ ಮತ್ತು ಧನಂಜಯನ ಒಡನಾಟವೇ ಕಾರಣವೆಂದು ಪೊಲೀಸರು ಶಂಕಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

