Breaking News

ಹುಬ್ಬಳ್ಳಿ | ಮಧ್ಯಾರಾಧನೆ: ಗುರುರಾಯರ ಸ್ಮರಣೆ

ರಾಘವೇಂದ್ರ ಸ್ವಾಮಿಗಳ 354ನೇ ಆರಾಧನಾ ಮಹೋತ್ಸವದ ಮಧ್ಯಾರಾಧನೆ ದಿನವಾದ ಸೋಮವಾರ ನಗರದ ವಿವಿಧ ಮಠಗಳಲ್ಲಿ ರಥೋತ್ಸವ, ಧಾರ್ಮಿಕ ಕಾರ್ಯಕ್ರಮಗಳು ಅದ್ದೂರಿಯಾಗಿ ನಡೆದವು. ಭಕ್ತರು ರಾಯರ ನಾಮ ಸ್ಮರಣೆ ಮಾಡಿ ಪುನೀತರಾದರು. ವಿವಿಧ ಮಠಗಳಲ್ಲಿ ವಿದ್ಯುದ್ದೀಪಾಲಂಕಾರ ಭಕ್ತರ ಸೆಳೆಯಿತು.ಭವಾನಿ ನಗರದ ನಂಜನಗೂಡು ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಹೋಮ ಮತ್ತಿತರ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು. ಸಾವಿರಾರು ಭಕ್ತರು ರಾಯರ ಅಲಂಕೃತ ಬೃಂದಾವನದ ದರ್ಶನ ಪಡೆದರು. ಪ್ರಹ್ಲಾದ ರಾಜರಿಗೆ ಕನಕಾಭಿಷೇಕ ಸೇವೆ ಸಲ್ಲಿಸಿದರು.ಹುಬ್ಬಳ್ಳಿಯ ಶಕ್ತಿ ಕಾಲೊನಿಯ ಮೃತ್ಯುಂಜಯ ನಗರದಲ್ಲಿನ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ರಾಯರ ಆರಾಧನೆ ಅಂಗವಾಗಿ ಆ.12ರಂದು ಸಂಜೆ 7 ಗಂಟೆಗೆ ದಾಸವಾಣಿ ಕಾರ್ಯಕ್ರಮ ಆಯೋಜಿಸಲಾಗಿದೆ. ‘ಉತ್ತರಾರಾಧನಾ ಮಹೋತ್ಸವದ ಅಂಗವಾಗಿ ಗಾಯಕ ಈಶ್ವರಪ್ಪ ಅವರು ಕಾರ್ಯಕ್ರಮ ನಡೆಸಿಕೊಡಲಿದ್ದಾರೆ.

Share News

About BigTv News

Check Also

6ನೇ ತರಗತಿ ಮೇಲೆ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿ ಬಂಧನ

ಮುಂಡಗೋಡ: ಆರನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಗರ್ಭಿಣಿಯನ್ನಾಗಿಸಿದ ಆರೋಪದ ಮೇಲೆ 65 ವರ್ಷದ ಇಸ್ಮಾಯಿಲ್ ಹುಲಗೂರ …

Leave a Reply

Your email address will not be published. Required fields are marked *