Breaking News

ದರ್ಶನ್‌, ಪವಿತ್ರಾ ಬೇಲ್‌ ರದ್ದು- ನ್ಯಾಯಂಗದ ಮೇಲೆ ನಂಬಿಕೆ ಹೆಚ್ಚಿದೆ ಎಂದ ರೇಣುಕಾಸ್ವಾಮಿ ಕುಟುಂಬ.

ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟ ದರ್ಶನ್ , ಪವಿತ್ರಾ ಗೌಡ ಹಾಗೂ ಇತರ ಆರೋಪಿಗಳ ಜಾಮೀನು ರದ್ದು ಮಾಡಿ ಸುಪ್ರೀಂಕೋರ್ಟ್ ತೀರ್ಪು ಪ್ರಕಟಿಸಿದೆ.ಬೇಲ್‌ ರದ್ದುಗೊಳಿಸಿದ ತೀರ್ಪು ಹೊರಬರುತ್ತಿದ್ದಂತೆ ಕೊಲೆಯಾದ ರೇಣುಕಾಸ್ವಾಮಿ ಅವರ ಕುಟುಂಬ ಭಾವುಕರಾಗಿದ್ದಾರೆ. ನಮಗೆ ಕಾನೂನಿನ ಮೇಲೆ ನಂಬಿಕೆ ಇನ್ನೂ ಹೆಚ್ಚಾಗಿದೆ ಎಂದು ಪ್ರತಿಕ್ರಿಯಿಸಿದ್ದಾರೆ.ರೇಣುಕಾಸ್ವಾಮಿ ಅವರ ಪತ್ನಿ ಸಹನಾ ಪ್ರತಿಕ್ರಿಯೆ ನೀಡಿ, ಯಾರು ತಪ್ಪು ಮಾಡಿದ್ದಾರೊ ಅವರಿಗೆ ಶಿಕ್ಷೆ ಆಗಲಿ. ಕಾನೂನಿನಲ್ಲಿ ಏನು ಶಿಕ್ಷೆ ಕೊಡುತ್ತಾರೋ ಗೊತ್ತಿಲ್ಲ. ಎಲ್ಲ ದೇವರ ಕೈಯಲ್ಲಿದೆ. ಕಾನೂನಿನಲ್ಲಿ ಯಾರಿದ್ದರೇನು ಎಲ್ಲರೂ ಸಮಾನರು ಎಂದರು.ವಾದ ಪ್ರತಿವಾದಗಳನ್ನು ಆಲಿಸಿದ ಬಳಿಕ ಪೀಠವು, ನಟ ದರ್ಶನ್ ಪವಿತ್ರ ಗೌಡ ಸೇರಿದಂತೆ ಒಟ್ಟು ಏಳು ಆರೋಪಿಗಳ ಜಾಮೀನು ರದ್ದುಗೊಳಿಸಿ, ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ಪ್ರಕಟಿಸಿದೆ.

Share News

About BigTv News

Check Also

ಹುಬ್ಬಳ್ಳಿ ಸಿದ್ಧಾರೂಢ ಮಠದ ಬಳಿ ಮಹಿಳೆ ಮೇಲೆ ಅತ್ಯಾಚಾರ ಆರೋಪ ಪ್ರಕರಣ ದಾಖಲು

ಹುಬ್ಬಳ್ಳಿ: ಸಿದ್ಧಾರೂಢ ಮಠದ ಪುಷ್ಕರಣಿ ಬಳಿಯ ಶೌಚಾಲಯದ ಹಿಂಭಾಗ 50 ವರ್ಷದ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ ಹಳೇಹುಬ್ಬಳ್ಳಿ …

Leave a Reply

Your email address will not be published. Required fields are marked *