Breaking News

ಲಾರಿಗೆ ಬಸ್ ಡಿಕ್ಕಿ, ಮೂವರು ಸ್ಥಳದಲ್ಲೇ ಸಾವು!

ನಿಂತಿದ್ದ ಲಾರಿಗೆ ಕೆಎಸ್​​ಆರ್​​ಟಿಸಿ ಬಸ್ (KSRTC) ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, 7 ಜನರ ಸ್ಥಿತಿ ಗಂಭೀರವಾಗಿರುವಂತಹ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಮಾವಳ್ಳಿ ಕ್ರಾಸ್​ನಲ್ಲಿ ನಡೆದಿದೆ.ಬಾಗಲಕೋಟ ಜಿಲ್ಲೆಯ ಬಾದಾಮಿ ತಾಲೂಕಿನ ಗುಳೆದಗುಡ್ಡ ಗ್ರಾಮದ ನಿಲವ್ವ ಹರದೊಳ್ಳಿ (40), ಜಾಲಿಹಾಳ ಗ್ರಾಮದ ಗಿರಿಜವ್ವಾ ಬೂದನ್ನವರ (30) ಮತ್ತು ಇನ್ನೋರ್ವ 45 ವರ್ಷದ ವ್ಯಕ್ತಿ (ಹೆಸರು ಪತ್ತೆ ಆಗಿಲ್ಲ) ಮೃತರು. ಇನ್ನು ಗಾಯಗೊಂಡ 7 ಜನರು ಬಾಗಲಕೋಟೆ ಮೂಲದವರು ಎಂದು ತಿಳಿದು ಬಂದಿದೆ. ಚಿಕ್ಕಚಿಕ್ಕ ಮಕ್ಕಳಿಗೂ ಗಂಭೀರ ಗಾಯಗಳಾಗಿದ್ದು ಹುಬ್ಬಳ್ಳಿಯ ಕಿಮ್ಸ್​ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆಲಮಟ್ಟಿ ಗ್ರಾಮದ ಯಮನಪ್ಪ ಮಾಗಿ ಬಸ್ ಚಾಲಕನ ಮೇಲೆ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಆಟೋ ಗಲಾಟೆ: ದೇವಸ್ಥಾನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಸವರ್ಣೀಯರಿಂದ ಹಲ್ಲೆ

ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಗುರುಸಣಗಿ ಗ್ರಾಮದ ಸಿದ್ದಲಿಂಗೇಶ್ವರ ದೇವಸ್ಥಾನಕ್ಕೆ ದರ್ಶನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಕಲ್ಲು ಹಾಗೂ …

Leave a Reply

Your email address will not be published. Required fields are marked *