ಮೇಕೆ ಮತ್ತು ಕುರಿಗಳನ್ನು ತುಂಬಿದ್ದ ಲಾರಿ ಹಾಗೂ ಕೆಎಸ್ಆರ್ಟಿಸಿ ಬಸ್ ನಡುವೆ ರಾಷ್ಟ್ರೀಯ ಹೆದ್ದಾರಿ 48ರ ಗುಂಡೇನಹಳ್ಳಿ ಬಳಿ ಶನಿವಾರ ಬೆಳಗ್ಗಿನ ಜಾವ 3:30 ಗಂಟೆ ಸಮಯದಲ್ಲಿ ಅಪಘಾತ ಸಂಭವಿಸಿದ್ದು, ಮೂವರು ಸಾವನ್ನಪ್ಪಿರುವಂತಹ ಘಟನೆ ನಡೆದಿದೆ.ಲಾರಿಯಲ್ಲಿದ್ದ ಸೀನಪ್ಪ (50), ನಜೀರ್ ಅಹ್ಮದ್ (36) ಮತ್ತು ಆನಂದ್ (42) ಮೃತರು.ಲಾರಿಯು ಮೇಕೆ ಮತ್ತು ಕುರಿಗಳನ್ನು ತುಂಬಿಕೊಂಡು ಮುಧೋಳದಿಂದ ತುಮಕೂರು ಮಾರ್ಗವಾಗಿ ಬೆಂಗಳೂರು ಕಡೆಗೆ ತೆರಳುತ್ತಿತ್ತು. ಸ್ಥಳಕ್ಕೆ ನೆಲಮಂಗಲ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಮೃತದೇಹಗಳನ್ನು ಹೊರತೆಗೆದು ರಸ್ತೆ ಸಂಚಾರ ಸುಗಮಗೊಳಿಸಿದರು.ಈ ಸಂಬಂಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

